ಹುಬ್ಬಳ್ಳಿ: ಹುಬ್ಬಳ್ಳಿ ನಗರದ ಗೋಕುಲ ರಸ್ತೆಯ ರಾಮಲಿಂಗ ನಗರ, ರವಿ ನಗರ ಸೇರಿದಂತೆ ಇತರ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ ಆಗುತ್ತಿಲ್ಲ. ಹೀಗಾಗಿ ಈ ಬಡಾವಣೆಗಳ ನಿವಾಸಿಗಳು ರೋಸಿ ಹೋಗಿದ್ದಾರೆ. ಕಳೆದ 12 ದಿನಗಳಿಂದ ನೀರು ಸರಬರಾಜು ಮಾಡದ ವ ಅಧಿಕಾರಿಗಳು, ಜನಪ್ರತಿನಿಧಿಗಳ ವಿರುದ್ಧ ನಾರಿಯರು ಬೀದಿಗಿಳಿದಿದ್ದಾರೆ.
ಕುಡಿಯುವ ನೀರಿಗಾಗಿ ಆಗ್ರಹಿಸಿ ಸ್ಥಳೀಯರು ಖಾಲಿ ಕೊಡ ಹಿಡಿದು ಪ್ರತಿಭಟನೆ ನಡೆಸಿದರು. ನೆಹರು ನಗರ ವಾಟರ್ ಟ್ಯಾಂಕ್, ಗೋಕುಲ್ ರೋಡ್ ಮುಂದೆ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದ ಮಹಿಳೆಯರು, ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ರಾಮಣ್ಣ ಬಡಿಗೇರ ಪ್ರತಿನಿಧಿಸುವ ವಾರ್ಡ್ ನಲ್ಲಿಯೇ ನೀರಿಗೆ ಬರ ಎದುರಾಗಿದೆ. ಚುನಾವಣೆ ಬಂದಾಗ ಭರವಸೆ ನೀಡುವ ಜನಪ್ರತಿನಿಧಿಗಳು ಎಲ್ಲಿ ಎಂದು ನಿವಾಸಿಗಳು ಕಿಡಿಕಾರಿದ್ದಾರೆ.
ಸೋಫಿಯಾ ಖುರೇಷಿ ಪತಿ ಮನೆ ಮೇಲೆ RSS ದಾಳಿ: ಸುಳ್ಳು ಸುದ್ದಿ ಹರಿಬಿಟ್ಟ ಕಿಡಿಗೇಡಿ ವಿರುದ್ಧ FIR ದಾಖಲು