ರಾವಲ್ಪಿಂಡಿ ಕ್ರೀಡಾಂಗಣವು ಡ್ರೋನ್‌ಗಳ ದಾಳಿಗೆ ತುತ್ತಾಗಿದ್ದು, ಪಾಕಿಸ್ತಾನ ಸೂಪರ್ ಲೀಗ್‌ನ ಉಳಿದ ಎಲ್ಲಾ ಪಂದ್ಯಗಳನ್ನು ಕರಾಚಿಗೆ ಸ್ಥಳಾಂತರಿಸಲಾಗಿದೆ. ವರದಿಗಳ ಪ್ರಕಾರ, ದಿನದ ಆರಂಭದಲ್ಲಿ ರಾವಲ್ಪಿಂಡಿ ಕ್ರಿಕೆಟ್ ಕ್ರೀಡಾಂಗಣದ ಆವರಣಕ್ಕೆ ಡ್ರೋನ್ ಅಪ್ಪಳಿಸಿತ್ತು,
ಇದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯನ್ನು ಪಿಎಸ್‌ಎಲ್‌ನ ಉಳಿದ ಪಂದ್ಯಗಳ ಸ್ಥಳವನ್ನು ಬದಲಾಯಿಸಲು ಪ್ರೇರೇಪಿಸಿತು. ಪೇಶಾವರ್ ಝಲ್ಮಿ ಮೇ 8 ರಂದು ಕರಾಚಿ ಕಿಂಗ್ಸ್ ವಿರುದ್ಧ ಆಡಬೇಕಿತ್ತು, ಆದರೆ ಹೊಸ ಬೆಳವಣಿಗೆಯಿಂದಾಗಿ, ಪಂದ್ಯವನ್ನು ಸ್ಥಳಾಂತರಿಸಲಾಗಿದೆ.
ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಲು ನೀರಿಗೆ ಒಂದು ಚಿಟಿಕೆ ಈ ಪುಡಿ ಹಾಕಿ ಕುಡಿಯಿರಿ.. ಆಮೇಲೆ ರಿಸಲ್ಟ್ ನೋಡಿ!
ಈ ದಾಳಿಯಲ್ಲಿ ಕ್ರೀಡಾಂಗಣದ ಬಳಿಯಿರುವ ರೆಸ್ಟೋರೆಂಟ್ ಕೂಡ ಹಾನಿಗೊಳಗಾಗಿದೆ. ಪಾಕಿಸ್ತಾನ ಮಾಧ್ಯಮಗಳ ಪ್ರಕಾರ, ಸಂಬಂಧಪಟ್ಟ ಅಧಿಕಾರಿಗಳು ಆ ಪ್ರದೇಶವನ್ನು ಸೀಲ್ ಮಾಡಿದ್ದು, ಡ್ರೋನ್ ಎಲ್ಲಿಂದ ಬಂತು ಎಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ದಾಳಿಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿರುವ ವರದಿಗಳಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ದಾಳಿಯ ವಿಡಿಯೋಗಳು ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
ವಾಸ್ತವವಾಗಿ ಪಾಕಿಸ್ತಾನ ಸೂಪರ್ ಲೀಗ್‌ನ 27 ನೇ ಪಂದ್ಯವು ಮೇ 8 ರಂದು (ಗುರುವಾರ) ರಾವಲ್ಪಿಂಡಿ ಕ್ರೀಡಾಂಗಣದಲ್ಲಿ ಡೇವಿಡ್ ವಾರ್ನರ್ ನಾಯಕತ್ವದ ಕರಾಚಿ ಕಿಂಗ್ಸ್ ಮತ್ತು ಬಾಬರ್ ಅಜಮ್ ನೇತೃತ್ವದ ಪೇಶಾವರ್ ಝಲ್ಮಿ ನಡುವೆ ನಡೆಯಬೇಕಿತ್ತು. ಆದರೀಗ ಈ ಪಂದ್ಯದ ಮೇಲೆ ಬಿಕ್ಕಟ್ಟಿನ ಮೋಡಗಳು ಕವಿಯುತ್ತಿವೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ ಪಿಎಸ್‌ಎಲ್ ಅನ್ನು ನಿಲ್ಲಿಸಲು ಇನ್ನೂ ನಿರ್ಧರಿಸಿಲ್ಲವಾದರೂ, ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದೆಂದು ವರದಿಯಾಗಿದೆ.