ದೆಹಲಿಯ ಮಧು ವಿಹಾರ್ನಲ್ಲಿ ಧೂಳಿನ ಬಿರುಗಾಳಿಯ ಸಮಯದಲ್ಲಿ ಗೋಡೆ ಕುಸಿದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ರಾಷ್ಟ್ರದ ರಾಜಧಾನಿಯಲ್ಲಿ ಈ ಘಟನೆ ನಡೆದಾಗ ಬಲವಾದ ಧೂಳಿನ ಬಿರುಗಾಳಿ, ಗಾಳಿ ಮತ್ತು ಮಳೆ ಎಲ್ಲವೂ ಇತ್ತು. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಬಿದ್ದ ಪರಿಣಾಮ ಓರ್ವ ಮೃತಪಟ್ಟಿದ್ದು,
ಹಲವು ಮಂದಿ ಗಾಯಗೊಂಡಿದ್ದಾರೆ. ಈ ವಿಡಿಯೋ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ದೆಹಲಿಯ ಮಧು ವಿಹಾರ್ನಲ್ಲಿ ಗೋಡೆ ಕುಸಿದು ಅದರ ಅವಶೇಷಗಳು ವ್ಯಕ್ತಿ ಮೇಲೆ ಬಿದ್ದು ಅವರು ಸಾವನ್ನಪ್ಪಿದ್ದಾರೆ. ವ್ಯಕ್ತಿಯೊಬ್ಬರು ನಡೆದುಕೊಂಡು ಹೋಗುತ್ತಿರುವುದು ಸಿಸಿಟಿವಿ ವಿಡಿಯೋದಲ್ಲಿ ಕಂಡುಬಂದಿದೆ.