ಇಸ್ಲಾಮಾಬಾದ್: ಪಾಕಿಸ್ತಾನ ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ರಿಕ್ಟರ್ ಮಾಪಕದಲ್ಲಿ 5.3 ತೀವ್ರತೆಯ ಮಧ್ಯಮ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ತಿಳಿಸಿದೆ. ಭೂಕಂಪವು 10 ಕಿಲೋಮೀಟರ್ ಆಳದಲ್ಲಿದ್ದು, ಅದರ ಕೇಂದ್ರಬಿಂದು 33.70 N ಅಕ್ಷಾಂಶ ಮತ್ತು 72.43 E ರೇಖಾಂಶದಲ್ಲಿದೆ ಎಂದು NCS ವರದಿ ಮಾಡಿದೆ.
ನೀವು ಸ್ವಿಮಿಂಗ್ ಮಾಡುತ್ತೀರಾ..? ಹಾಗಾದ್ರೆ ಮೊದಲು ಈ ವಿಷಯಗಳನ್ನು ತಿಳಿದುಕೊಳ್ಳಿ..!
ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಭೂಕಂಪ ಸಂಭವಿಸಿದೆ, ಇದರ ಪರಿಣಾಮ ಜಮ್ಮು ಮತ್ತು ಕಾಶ್ಮೀರದಲ್ಲೂ ಭೂಮಿ ಕಂಪಿಸಿದ ಅನುಭವವಾಗಿದೆ. ಸ್ಥಳೀಯ ಮಾಧ್ಯಮಗಳ ವರದಿ ಪ್ರಕಾರ, ಭೂಕಂಪ ಸಂಭವಿಸಿದ ಬಳಿಕ ಇಸ್ಲಾಮಾಬಾದ್‌ನಲ್ಲಿ ಯಾವುದೇ ಹಾನಿಯಾಗಲಿ, ಸಾವು-ನೋವುಗಳಾಗಲಿ ಸಂಭವಿಸಿಲ್ಲ.
ಈ ಕುರಿತು ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ನಲ್ಲಿ ಸಂಭವಿಸಿದ್ದ ಭೂಕಂಪ ಸಾವಿರಾರು ಜನರನ್ನು ಬಲಿ ಪಡೆದಿತ್ತು ಎಂಬುದನ್ನು ಇಲ್ಲಿ ಸ್ಮರಿಸಬಹುದು.