Close Menu
Ain Live News
    Facebook X (Twitter) Instagram YouTube
    Monday, May 26
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ದಿನಕ್ಕೊಂದು ಕೆಂಪು ಬಾಳೆಹಣ್ಣು ತಿನ್ನಿ: ಪ್ರತಿದಿನ ನಾನಾ ಆರೋಗ್ಯ ಲಾಭ ಪಡೆಯಿರಿ..!

    By AIN AuthorNovember 18, 2023
    Share
    Facebook Twitter LinkedIn Pinterest Email
    Demo

    ಬಾಳೆಹಣ್ಣು ಯಾರಿಗೆ ಇಷ್ಟವಿಲ್ಲ ಹೇಳಿ. ಸಾಮಾನ್ಯವಾಗಿ ಎಲ್ಲರೂ ಇಷ್ಟಪಟ್ಟು ಸೇವಿಸುವ ಹಣ್ಣೆಂದರೆ ಅದು ಬಾಳೆಹಣ್ಣು. ಆರೋಗ್ಯವನ್ನು ಕಾಪಾಡುವ ಬಾಳೆಹಣ್ಣು ಹೆಚ್ಚು ಪ್ರಯೋಜನಗಳನ್ನು ಹೊಂದಿದೆ. ಊಟದ ಕೊನೆಯಲ್ಲಿ ಒಂದು ಬಾಳೆಹಣ್ಣು ತಿಂದರೆ ತೃಪ್ತಿಯಾಗುತ್ತೆ. ದೇಹ ಹಗರುವಾಗುವ ಜೊತೆಗೆ ಜೀರ್ಣ ಕ್ರಿಯೆ ಚೆನ್ನಾಗಿ ಆಗುತ್ತದೆ. ಬಾಳೆಹಣ್ಣು ಖನಿಜಾಂಶ,

    ವಿಟಮಿನ್, ಫೈಬರ್ ಅಂಶಗಳನ್ನು ಹೊಂದಿದೆ. ವಿಶ್ವದಾದ್ಯಂತ 15 ರಿಂದ 16 ತರಹದ ಬಾಳೆಹಣ್ಣುಗಳು ಇವೆ. ಈ ಪೈಕಿ ಕೆಂಪು ಬಾಳೆಹಣ್ಣು ಕೂಡಾ ಒಂದು. ಕೆಂಪು ಬಾಳೆಹಣ್ಣು ಹೆಚ್ಚು ಪ್ರಸಿದ್ಧಿ ಹೊಂದಿಲ್ಲ. ಆದರೆ ಇತರೆ ಬಾಳೆಹಣ್ಣಿಗಿಂತ ಕೆಂಪು ಬಾಳೆಹಣ್ಣು ಹೆಚ್ಚು ಸಿಹಿಯಾಗಿರುತ್ತದೆ. ಜೊತೆಗೆ ಇದನ್ನು ಸೇವಿಸುವುದರಿಂದ ಕೆಲ ಪ್ರಯೋಜನಗಳನ್ನ ಪಡೆದುಕೊಳ್ಳಬಹುದು.

    ದೇಹದ ತೂಕ ಇಳಿಸಬಹುದು ಕೆಂಪು ಬಾಳೆಹಣ್ಣು ಸೇವಿಸುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ. ಇದರಲ್ಲಿ ಇರುವ ನಾರಿನಂಶ ಪದೇ ಪದೇ ಹಸಿವಾಗದಂತೆ ನೋಡಿಕೊಳ್ಳುತ್ತದೆ. ತೂಕ ಇಳಿಸುವವರು ಅನ್ನದ ಬದಲು ಒಂದು ಕೆಂಪು ಬಾಳೆಹಣ್ಣನ್ನು ತಿನ್ನಬಹುದು.

    ರೋಗ ನಿರೋಧಕ ಶಕ್ತಿ ವೃದ್ಧಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕೆಂಪು ಬಾಳೆಹಣ್ಣು ಸೇವಿಸುವುದು ಅನಿವಾರ್ಯ. ಕೊರೊನಾ ವಿರುದ್ಧ ಹೋರಾಡಲು ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಎಲ್ಲಾ ರೀತಿಯ ವಿಧಾನಗಳನ್ನು ಅನುಸರಿಸುತ್ತಾರೆ. ಈ ವಿಧಾನಕ್ಕೆ ಕೆಂಪು ಬಾಳೆಹಣ್ಣು ಸೇವಿಸುವುದನ್ನು ಸೇರಿಸಿ. ಇದರಲ್ಲಿ ವಿಟಮಿನ್ ಸಿ ಮತ್ತು ವಿಟಮಿನ್ ಬಿ6 ಹೇರಳವಾಗಿದ್ದು, ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

    ಮುಖದ ಕಾಂತಿ ಹೆಚ್ಚಳ ಕೆಂಪು ಬಾಳೆಹಣ್ಣಿನಿಂದ ಮುಖದ ಕಾಂತಿಯನ್ನೂ ಹೆಚ್ಚಿಸಬಹುದು. ಬಾಳೆಹಣ್ಣನ್ನು ಕಿವುಚಿ ಅದಕ್ಕೆ ಮೂರ್ನಾಲ್ಕು ಜೇನುತುಪ್ಪ ಹನಿಗಳನ್ನು ಹಾಕಿ ಮಿಶ್ರಣ ಮಾಡಿ. ನಂತರ ಮುಖಕ್ಕೆ ಹಚ್ಚಿ. ಒಣಗಿದ ಬಳಿಕ ತಣ್ಣೀರಿನಿಂದ ಮುಖ ತೊಳೆಯಿರಿ. ಈ ಮೂಲಕ ಮುಖದ ಕಾಂತಿ ಹೆಚ್ಚಾಗುತ್ತದೆ.

    ಕೂದಲು ಉದುರುವಿಕೆ ತಡೆಗಟ್ಟಬಹುದು ಕೂದಲು ಮುಖದ ಕಾಂತಿಯನ್ನು ಹೆಚ್ಚಿಸುವ ಜೊತೆಗೆ ಕೂದಲು ಉದುರುವಿಕೆಯನ್ನು ತಡೆಗಟ್ಟಬಹುದು. ತೆಂಗಿನ ಎಣ್ಣೆ ಅಥವಾ ಸಾಸಿವೆ ಎಣ್ಣೆಗೆ ಕಿವುಚಿದ ಕೆಂಪು ಬಾಳೆಹಣ್ಣು ಮಿಶ್ರಣ ಮಾಡಿ. ನಂತರ ತಲೆ ಬುಡಕ್ಕೆ ಹಚ್ಚಿ. ಹೀಗೆ ಮಾಡುವುದರಿಂದ ಕೂದಲು ಉದುರುವುದು ನಿವಾರಣೆಯಾಗುತ್ತದೆ.

     

    Demo
    Share. Facebook Twitter LinkedIn Email WhatsApp

    Related Posts

    ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!

    May 25, 2025

    ತಿಳಿದಿರಲಿ: ಅಡಿಕೆಯಲ್ಲಿ ಅಡಗಿರುವ ಆರೋಗ್ಯಕರ ಅಂಶಗಳನ್ನು ತಿಳಿದುಕೊಳ್ಳಿ!

    May 25, 2025

    Karnataka Covid Guidelines: ಮತ್ತೆ ಬಂತು ಕೊರೊನಾ: ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – ಇಲ್ಲಿದೆ ಸಂಪೂರ್ಣ ಮಾಹಿತಿ

    May 24, 2025

    ಅಪ್ಪಿತಪ್ಪಿಯೂ ಇವುಗಳನ್ನು ಕುಕ್ಕರ್’ನಲ್ಲಿ ಬೇಯಿಸಬೇಡಿ..! ಇದು ಅನಾರೋಗ್ಯವನ್ನು ಖರೀದಿಸಿದಂತೆ..

    May 24, 2025

    ಪ್ರತಿನಿತ್ಯ ಬಾದಾಮಿ ತಿನ್ನುವುದರಿಂದ ಚರ್ಮ, ಕೂದಲು ಮತ್ತು ಆರೋಗ್ಯಕ್ಕೆ ಏನೆಲ್ಲಾ ಪ್ರಯೋಜನ ಗೊತ್ತಾ!?

    May 23, 2025

    ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದ್ರೆ ಸಾಕು ಸಂಪೂರ್ಣ ನಾರ್ಮಲ್ ಆಗುತ್ತೆ ಶುಗರ್ ಲೆವಲ್.!

    May 23, 2025

    ಮನೆ ಮುಂದೆ ಯಾಕೆ ರಂಗೋಲಿ ಹಾಕಬೇಕು ಗೊತ್ತಾ..? ಇಲ್ಲಿದೆ ರಂಗೋಲಿ ಕುರಿತು ಇಂಟ್ರಸ್ಟಿಂಗ್ ಮಾಹಿತಿ

    May 23, 2025

    ಗುಡ್ ನ್ಯೂಸ್: ಕ್ಯಾನ್ಸರ್ ರೋಗಿಗಗಳಿಗಾಗಿ ಮಹತ್ವದ ತೀರ್ಮಾನ ಕೈಗೊಂಡ ರಾಜ್ಯ ಸರ್ಕಾರ!

    May 23, 2025

    ರಾತ್ರಿ ನೀವು ಚಪಾತಿ ತಿಂದು ಮಲಗ್ತೀರಾ!? ಹಾಗಿದ್ರೆ ಈ ಸುದ್ದಿ ತಪ್ಪದೇ ಓದಿ!

    May 22, 2025

    ನಿತ್ಯವೂ ರೋಗಿಗಳ ಹಾರೈಕೆಯಲ್ಲಿರುವ ನರ್ಸ್‌ಗಳಿಗೆ ವಿಶೇಷ ದಿನಾಚರಣೆ!

    May 22, 2025

    ಹಿಮ್ಮಡಿ ಹೊಡೆದು ಧಗಧಗನೆ ಉರಿತಿದ್ಯಾ!? ಹಾಗಿದ್ರೆ ಈ ಮನೆಮದ್ದು ಫಾಲೋ ಮಾಡಿ!

    May 22, 2025

    ಕ್ಯಾನ್ಸರ್‌ ರೋಗಿಗಳಿಗೆ ಗುಡ್‌ ನ್ಯೂಸ್.. 16 ಜಿಲ್ಲಾಸ್ಪತ್ರೆಗಳಲ್ಲಿ ಕೀಮೋಥೆರಪಿ ಕೇಂದ್ರಗಳ ಆರಂಭಕ್ಕೆ ಸರ್ಕಾರ ನಿರ್ಧಾರ!

    May 22, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.