ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಕರ್ನಾಟಕದ ಹಲವು ರಾಜಕಾರಣಿಗಳ ಮನೆಗಳ ಮೇಲೆ ದಾಳಿ ಮಾಡಿದ್ದಾರೆ. ಮಾಜಿ ಸಚಿವರು, ಶಾಸಕರು ಮತ್ತು ಸಂಸದರ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದೆ. ಇನ್ನೂ ಈ ವಿಚಾರವಾಗಿ ವಿಧಾನಸಭೆ ಸರ್ಕಾರದ ಮುಖ್ಯ ಸಚೇತಕ ಅಶೋಕ್ ಪಟ್ಟಣ ಪ್ರತಿಕ್ರಿಯೇ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು,
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಸಂಸದ ತುಕಾರಾಂ, ಶಾಸಕ ನಾಗೇಂದ್ರ ಸೇರಿದಂತೆ ಹಲವರ ಮೇಲೆ ಇಡಿ ದಾಳಿ ಮಾಡಿದೆ. ಎಂಪಿ ತುಕಾರಾಂ ಸಭ್ಯಸ್ಥ ವ್ಯಕ್ತಿ. ಬಳ್ಳಾರಿಯಲ್ಲಿ ಕಾಂಗ್ರೆಸ್ನವರ ಮೇಲೆ ದಾಳಿ ನಡೆದಿದೆ. ಇಡಿ ದಾಳಿ ಮಾಡಿ ತೇಜೊವಧೆಗೆ ಮಾಡೋ ಕೆಲಸ ಮಾಡ್ತಿದ್ದಾರೆ. ಈಗಾಗಲೇ ತನಿಖೆ ನಡೆಯುತ್ತಿದೆ. ಈಗ ದಾಳಿ ಮಾಡ್ತಿರೋದಕ್ಕೆ ರಾಜಕೀಯ ಕಾರಣ ಇದೆ ಅಂತ ಆರೋಪ ಮಾಡಿದರು.
ಚುನಾವಣೆಗೆ ಹಣ ಬಳಕೆಯಾಗಿದೆ ಅನ್ನೋದಕ್ಕೆ ತನಿಖೆ ನಡೆಯುತ್ತಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾಂಗ್ರೆಸ್ ನಾಯಕರ ಮೇಲೆ ದಾಳಿ ಆಗ್ತಿದೆ. ತನಿಖೆಯಲ್ಲಿ ತಪ್ಪಾಗಿರೋದು ಕಂಡು ಬಂದ್ರೆ ಶಿಕ್ಷೆಯಾಗಲಿ. ಅದು ಬಿಟ್ಟು ಹೀಗೆ ತೇಜೋವಧೆ ಮಾಡೋದು ಸರಿಯಲ್ಲ ಎಂದರು.