ಕಲಬುರಗಿ: ಕಾಂಗ್ರೆಸ್ ಮುಖಂಡ ಹೆಚ್ ಕೆ ಇ ಸೊಸೈಟಿ ಮಾಜಿ ಅಧ್ಯಕ್ಷನ ಮನೆ ಮೇಲೆ ಇಡಿ ದಾಳಿ ಮಾಡಲಾಗಿದೆ. ಕಲಬುರಗಿಯ ರಿಂಗ್ ರೋಡ್ ಬಳಿಯಿರೋ ಭೀಮಾಶಂಕರ್ ಬಿಲಗುಂದಿ ಕಾಂಗ್ರೆಸ್ ಮುಖಂಡ ಹೆಚ್ ಕೆ ಇ ಸೊಸೈಟಿ ಮಾಜಿ ಅಧ್ಯಕ್ಷನ ಮನೆ ಮೇಲೆ ನಾಲ್ವರು ಅಧಿಕಾರಿಗಳ ತಂಡದಿಂದ ಏಕ ಕಾಲಕ್ಕೆ ದಾಳಿ ಮಾಡಲಾಗಿದೆ.
ಎಂಆರ್‌ಎಂಸಿ ಮೆಡಿಕಲ್ ಕಾಲೇಜ್ ಶಿಷ್ಯವೇತನ ಹಗರಣ ವಿಚಾರವಾಗಿ ಈ ದಾಳಿ ನಡೆದಿದೆ. 2018 ರಿಂದ 2024ರ ವರೆಗೆ ಎರಡು ಅವಧಿಗೆ ಭೀಮಾಶಂಕರ್ ಅಧ್ಯಕ್ಷರಾಗಿದ್ದರು.
kshaya Tritiya 2025: ಅಕ್ಷಯ ತೃತೀಯದಂದೇ ಚಿನ್ನ ಖರೀದಿಸಲು ಕಾರಣವೇನು..? ಇಲ್ಲಿದೆ ಮಾಹಿತಿ
700 ಜನ ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಹಣ ಕೊಡದೆ ವಂಚಿಸಲಾಗಿದೆ ಎಂದು ಆರೋಪಿಸಲಾಗಿದೆ. ಸುಮಾರು 80 ಕೋಟಿ ರೂ.ಗೂ ಅಧಿಕ ಹಣ ನೀಡದೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಭೀಮಾಶಂಕರ್ ಮನೆ ಮೇಲೆ ದಾಳಿ ಮಾಡಿರುವ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.