ಬೆಂಗಳೂರು: ಬೆಂಗಳೂರು ಮೂಲದ ನಾಯಿ ತಳಿಗಾರ ಎಸ್ ಸತೀಶ್ ಅವರು ವಿಶ್ವದ ಅತ್ಯಂತ ದುಬಾರಿ ತೋಳ ನಾಯಿಯನ್ನು 50 ಕೋಟಿ ರೂ.ಗೆ ಖರೀದಿಸಿರುವುದಾಗಿ ಹೇಳಿಕೊಂಡಿದ್ದರು. ಇದೀಗ ಶ್ವಾನಪ್ರೇಮಿ ಸತೀಶ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸತೀಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ (ED) ಅಧಿಕಾರಿಗಳು ಇಂದು ಮನೆ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ನಾಯಿಯ ಬೆಲೆ 50 ಕೋಟಿ ಅನ್ನೋದು ಸುಳ್ಳು ಎಂಬುದು ಗೊತ್ತಾಗಿದೆ. ಸದ್ಯ ಸ್ಥಳದಲ್ಲೇ ಬೀಡುಬಿಟ್ಟಿರುವ ಅಧಿಕಾರಿಗಳಿ ಪರಿಶೀಲನೆ ಮುಂದುವರಿಸಿದ್ದಾರೆ.
ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ದಿಕ್ಕಿನಲ್ಲಿ ಪೊರಕೆಯನ್ನು ಇಡಬಾರದು..! ಏನಾಗುತ್ತೆ ಗೊತ್ತಾ..?
ಸತೀಶ್ 50 ಕೋಟಿ ರೂ. ಕೊಟ್ಟು ಶ್ವಾನವೊಂದನ್ನು ಖರೀದಿ ಮಾಡಿರುವಿದಾಗಿ ಹೇಳಿಕೊಂಡಿದ್ದರು. ಕಾಡು ತೋಳ ಮತತ್ತು ಕಕೇಶಿಯನ್ ಶೆಫರ್ಡ್ ತಳಿಯ ಮಿಶ್ರಣವಾಗಿರುವ ಇದನ್ನು ತೋಳನಾಯಿ ಎಂದೂ ಕರೆಯುತ್ತಾರೆ.