ಬೆಂಗಳೂರು: ಗೃಹ ಸಚಿವ ಡಾ ಜಿ ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆ ಮೇಲೆ ಇಡಿ ದಾಳಿ ಮಾಡಲಾಗಿದೆ. ಈ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರನ್ಯಾಗೆ 15 ರಿಂದ 25 ಲಕ್ಷ ರೂ. ನೀಡಿದ್ದಾರಂತೆ. ಆಕೆಯ ಮದುವೆಗೆ ಗಿಫ್ಟ್ ಮಾಡಿರಬಹುದು.
ನಾನು ಅವರ ಬಳಿ ಮಾತಾಡಿದ್ದೇನೆ ಎಂದಿದ್ದಾರೆ. ಪರಮೇಶ್ವರ್ ಆರೋಗ್ಯವಾಗಿದ್ದು, ಕ್ಯಾಬಿನೆಟ್‌ಗೆ ಬರುತ್ತಾರೆ. ಅವರ ಮೇಲೆ ಸಾಕಷ್ಟು ಜವಾಬ್ದಾರಿ ಇದೆ. ಅವರು ಗೌರವಾನ್ವಿತ ವ್ಯಕ್ತಿ, ನಾನು ಅವರ ಜೊತೆ ಇರುತ್ತೇನೆ. ಇನ್ನೂ, ರನ್ಯಾ ತಪ್ಪು ಮಾಡಿದ್ರೆ ಕ್ರಮ ಆಗಲಿ ಎಂದಿದ್ದಾರೆ.
ನಿಮಗೂ ಈ ಸಮಸ್ಯೆ ಇದ್ಯಾ!? ಹಾಗಿದ್ರೆ ಆಲೂಗಡ್ಡೆ ಮುಟ್ಟಲೇಬೇಡಿ! ಇದು ತಿಳಿದ್ರೆ ಶಾಕ್ ಆಗ್ತೀರಾ!?
ಇನ್ನೂ ಸೋನಿಯಾ ಗಾಂಧಿ ಕೇಸ್ನಿಂದ ಹಿಡಿದು ಎಲ್ಲ ವಿಚಾರವಾಗಿ ನಿತ್ಯ ಹೋರಾಟ ಮಾಡುತ್ತೇವೆ. ನಮಗೆ ನ್ಯಾಯಾಲಯದ ಬಗ್ಗೆ ನಂಬಿಕೆ ಇದೆ. ಚಾರಿಟೇಬಲ್ ಟ್ರಸ್ಟ್ಗಳು ಸಾಕಷ್ಟು ನೆರವು ನೀಡುವ ಕೆಲಸ ಮಾಡುತ್ತಿವೆ. ಶಾಲಾ, ಕಾಲೇಜು ಫೀಸ್, ಮದುವೆ ಕಾರ್ಯಗಳಿಗೆ ನೆರವು ನೀಡಲಾಗುತ್ತದೆ. ಈ ರೀತಿಯ ಸಣ್ಣಪುಟ್ಟ ಚಾರಿಟಿ ನಡೆದಿರಬಹುದು, ಅದು ಇಲ್ಲ ಅಂತ ಹೇಳಲ್ಲ. ಮದುವೆ, ಆಸ್ಪತ್ರೆ ಬಿಲ್ನಂತಹ ಸಂದರ್ಭದಲ್ಲಿ ನೆರವಾಗಿರಬಹುದು. ಉಳಿದ ವಿಚಾರದ ಬಗ್ಗೆ ಏನು ಮಾಡುತ್ತಾರೋ ನೋಡೋಣ ಎಂದು ಹೇಳಿದರು.