ಬೆಳಗಾವಿ : ಸೈಬರ್ ವಂಚಕರ ಕಿರುಕುಳಕ್ಕೆ ವೃದ್ಧ ದಂಪತಿ ಬಲಿಯಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ನಡೆದಿದೆ. ಡಿಯಾಂಗೋ ನಜರತ್ (83) ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರೆ, ಇವರ ಪತ್ನಿ ಪ್ಲೇವಿಯಾನಾ ನಜರತ್ (79) ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ಈ ದಂಪತಿಗಳಿಗೆ ವಿಡಿಯೋ ಕರೆಯೊಂದು ಬಂದಿತ್ತು. ದೆಹಲಿ ಕ್ರೈಂ ಬ್ರ್ಯಾಂಚ್ನಿಂದ ಕರೆ ಮಾಡುತ್ತಿದ್ದೇವೆ, ನೀವು ಅಪರಾಧ ಕೃತ್ಯದಲ್ಲಿ ಶಾಮೀಲಾಗಿದ್ದೀರಿ ಎಂದು ಬೆದರಿಕೆ ಹಾಕಲಾಗಿತ್ತು. ಬಳಿಕ ಸೈಬರ್ ವಂಚಕರು ದಂಪತಿ ವಳಿ 5 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಹಣ ಕೊಟ್ಟ ಬಳಿಕವೂ ಮತ್ತೆ ವಿಡಿಯೋ ಕಾಲ್ ಮಾಡಿ ಧಮ್ಕಿ ಹಾಕಿದ್ದರು. ಹಣ ಕೊಡದಿದ್ದರೆ ಅರೆಸ್ಟ್ ಮಾಡುವುದಾಗಿ ಹೆದರಿಸಿದ್ದರು. ಇದರಿಂದ ಮನನೊಂದ ದಂಪತಿ ಡೆತ್ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸ್ಥಳಕ್ಕೆ ನಂದಗಡ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.