ಉತ್ತರ ಪ್ರದೇಶ: 100 ಮುಸ್ಲಿಂ ಕುಟುಂಬಗಳ ನಡುವೆ 50 ಹಿಂದೂ ಕುಟುಂಬಗಳಿದ್ದರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಪಾಡ್‌ಕಾಸ್ಟ್ ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, 100 ಮುಸ್ಲಿಂ ಕುಟುಂಬಗಳ ನಡುವೆ 50 ಹಿಂದೂ ಕುಟುಂಬಗಳಿದ್ದರೂ ಸುರಕ್ಷಿತವಾಗಿರಲು ಸಾಧ್ಯವಿಲ್ಲ.
ಆದ್ರೆ 100 ಹಿಂದೂ ಕುಟುಂಬಳ ನಡುವೆ ಒಂದು ಮುಸ್ಲಿಂ ಕುಟುಂಬ ಭದ್ರವಾಗಿದೆ.ಹಿಂದೂ ಆಡಳಿತಗಾರರು ಇತರರ ಮೇಲೆ ಅಧಿಪತ್ಯ ಸ್ಥಾಪಿಸಿದ ಉದಾಹರಣೆ ವಿಶ್ವ ಇತಿಹಾಸದಲ್ಲಿ ಇಲ್ಲ. ಇದಕ್ಕೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರವೇ ಕಾರಣ, ಇದಕ್ಕೂ ಮುನ್ನ ಪಾಕಿಸ್ತಾನದಲ್ಲೂ ಈ ಉದಾಹರಣೆ ಇತ್ತು. ಅಫ್ಘಾನಿಸ್ತಾನದಲ್ಲೂ ಏನಾಯ್ತು ಅನ್ನೋದು ನಮಗೆ ಗೊತ್ತಿದೆ ಎಂದು ಹೇಳಿದರು.
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
2017ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯದಲ್ಲಿ ಒಂದೇ ಒಂದು ಕೊಮುಗಲಭೆ ನಡೆದಿಲ್ಲ ಎಂದ ಸಿಎಂ ಯೋಗಿ, ಉತ್ತರ ಪ್ರದೇಶದಲ್ಲಿ ಹಿಂದೂಗಳು ಸುರಕ್ಷಿತವಾಗಿದ್ದರೆ ಮುಸ್ಲಿಮರೂ ಸುರಕ್ಷಿತ. ನಾನು ಒಬ್ಬ ಸಾಮಾನ್ಯ ಪ್ರಜೆ, ಉತ್ತರ ಪ್ರದೇಶದ ಪ್ರಜೆ. ಎಲ್ಲರ ಸಂತೋಷಕ್ಕಾಗಿ ಹಾರೈಸುವ ʻಯೋಗಿʼ ನಾನು. ಎಲ್ಲರ ಬೆಂಬಲದಿಂದ ಅಭಿವೃದ್ಧಿ ಸಾಧ್ಯ ಅಂತ ನಂಬುವವನು ನಾನು. ಸನಾತನ ಧರ್ಮವು ವಿಶ್ವದ ಅತ್ಯಂತ ಪುರಾತನ ಧರ್ಮವಾಗಿದೆ ಎಂದು ಒತ್ತಿ ಹೇಳಿದರು.