IPL 2025ರ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿರುವ 11 ಪಂದ್ಯಗಳಲ್ಲಿ 8 ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದು 16 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಶನಿವಾರ ನಡೆದ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ 2 ರನ್ಗಳ ರೋಚಕ ಗೆಲುವು ಸಾಧಿಸಿದ ಬಳಿಕ ಮುಂದಿನ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಎದುರಿಸಲಿದೆ.
ನಿಮಗೆ ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮುಕ್ತಿ ಬೇಕೆ? ಹಾಗಿದ್ರೆ ಈ ಟಿಪ್ಸ್ ಫಾಲೋ ಮಾಡಿ!
ಆರ್ ಸಿಬಿ ಈ ಆವೃತ್ತಿಯಲ್ಲಿ ಈಗಾಗಲೇ ತವರಿನ ಹೊರಗೆ ಆಡಿರುವ 6 ಪಂದ್ಯಗಳಲ್ಲೂ ಗೆಲುವು ಸಾಧಿಸಿದೆ. ಇದೀಗ ತವರಿನ ಹೊರಗೆ 7ನೇ ಪಂದ್ಯ ಆಡಲು ಸಜ್ಜಾಗಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಆರ್ ಸಿಬಿ ಇತಿಹಾಸ ಸೃಷ್ಟಿಸಲಿದೆ
ಈ ಬಾರಿಯ ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ತೋರಿರುವ RCB ಒಟ್ಟು 16 ಅಂಕಗಳನ್ನು ಕಲೆಹಾಕಿದರೂ, ಅಧಿಕೃತವಾಗಿ ಪ್ಲೇಆಫ್ಗೆ ಪ್ರವೇಶಿಸಿಲ್ಲ. ಇದಕ್ಕೆ ಮುಖ್ಯ ಕಾರಣ ಇತರೆ 7 ತಂಡಗಳು ಪ್ಲೇಆಫ್ ರೇಸ್ನಲ್ಲಿರುವುದು. ಅದರಲ್ಲೂ 4 ತಂಡಗಳಿಗೆ ಆರ್ಸಿಬಿ ತಂಡವನ್ನು ಹಿಂದಿಕ್ಕಿ ಪ್ಲೇಆಫ್ ಹಂತಕ್ಕೇರಲು ಉತ್ತಮ ಅವಕಾಶವಿದೆ. ಹೀಗಾಗಿಯೇ ಆರ್ಸಿಬಿ ಪಾಲಿಗೆ ಮುಂದಿನ ಮೂರು ಪಂದ್ಯಗಳು ನಿರ್ಣಾಯಕ. ಏಕೆಂದರೆ…
ಮುಂಬೈ ಇಂಡಿಯನ್ಸ್ ತಂಡವು ಮುಂದಿನ ಮೂರು ಮ್ಯಾಚ್ಗಳಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳನ್ನು ಮಣಿಸಿದರೆ, ಒಟ್ಟು 20 ಅಂಕಗಳನ್ನು ಪಡೆದು ಪ್ಲೇಆಫ್ಗೇರಲಿದೆ.
ಪಂಜಾಬ್ ಕಿಂಗ್ಸ್ ತಂಡವು ಮುಂದಿನ 3 ಪಂದ್ಯಗಳಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ರಾಜಸ್ಥಾನ್ ರಾಯಲ್ಸ್ ತಂಡಗಳನ್ನು ಸೋಲಿಸಿದರೆ 19 ಅಂಕಗಳೊಂದಿಗೆ ಪ್ಲೇಆಫ್ನಲ್ಲಿ ತನ್ನ ಸ್ಥಾನವನ್ನು ಖಚಿತಪಡಿಸಲಿದೆ.
ಹಾಗೆಯೇ ಗುಜರಾತ್ ಟೈಟಾನ್ಸ್ ತಂಡವು ಲಕ್ನೋ ಸೂಪರ್ ಜೈಂಟ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳನ್ನು ಮಣಿಸಿದರೆ ಒಟ್ಟು 18 ಅಂಕಗಳೊಂದಿಗೆ ಪ್ಲೇಆಫ್ ಹಂತಕ್ಕೇರಲಿದೆ.
ಇನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಮುಂದಿನ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದರೆ, ಅಂದರೆ ಚೆನ್ನೈ ಸೂಪರ್ ಕಿಂಗ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮಣಿಸಿದರೆ ಒಟ್ಟು 17 ಅಂಕಗಳನ್ನು ಪಡೆದು ಪ್ಲೇಆಫ್ಗೆ ಅರ್ಹತೆ ಪಡೆಯಲಿದೆ.
ಇದರ ನಡುವೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಲಕ್ನೋ ಸೂಪರ್ ಜೈಂಟ್ಸ್, ಸನ್ರೈಸರ್ಸ್ ಹೈದರಾಬಾದ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳ ವಿರುದ್ಧ ಸೋತರೆ 16 ಅಂಕಗಳಲ್ಲೇ ಉಳಿಯಲಿದೆ.
ಹೀಗಾದಲ್ಲಿ ಆರ್ಸಿಬಿ ತಂಡವು ಪ್ಲೇಆಫ್ ರೇಸ್ನಿಂದ ಹೊರಬೀಳಲಿದ್ದು, ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್, ಗುಜರಾತ್ ಟೈಟಾನ್ಸ್ ಹಾಗೂ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಗಳು ಮುಂದಿನ ಹಂತಕ್ಕೇರಲಿದೆ. ಹೀಗಾಗಿಯೇ ಆರ್ಸಿಬಿ ತಂಡದ ಪಾಲಿಗೆ ಮುಂದಿನ ಪಂದ್ಯಗಳು ನಿರ್ಣಾಯಕ ಆಗಲಿದೆ.