Close Menu
Ain Live News
    Facebook X (Twitter) Instagram YouTube
    Friday, May 23
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ!

    By AIN AuthorMay 23, 2025
    Share
    Facebook Twitter LinkedIn Pinterest Email
    Demo

    ಮೈಸೂರು, ಮೇ 23: ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ ಒದಗಿಸುವುದು ಸರ್ಕಾರದ ಗುರಿ. ಮೈಸೂರು ಜಿಲ್ಲೆಗೆ ಎಂ.ಆರ್.ಐ. ಸೌಲಭ್ಯವನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

    Road Accident: ರಸ್ತೆ ಅಪಘಾತದಲ್ಲಿ ಬ್ಯಾಂಕ್ ಮ್ಯಾನೇಜರ್ Spot Death!

    ಅವರು ಇಂದು ಜಿಲ್ಲಾ ಆಸ್ಪತ್ರೆ ಮೇಟಗಳ್ಳಿ ಯಲ್ಲಿ ಆಯೋಜಿಸಲಾಗಿದ್ದ ಡೇ ಕೇರ್ ಕಿಮೋಥೇರಪಿ ಕೇಂದ್ರ ವನ್ನು ವಿಡಿಯೋ ಸಂವಾದ ಮೂಲಕ ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಈ ಮೊದಲು ಕೀಮೋಥೆರಪಿ ಚಿಕಿತ್ಸೆಗೆ ಬೆಂಗಳೂರಿಗೆ ತೆರಳಬೇಕಾಗಿತ್ತು. ಇದು ರೋಗಿಗಳ ಪಾಲಿಗೆ ಕಷ್ಟಸಾಧ್ಯವಾಗಿತ್ತು. ರಾಜ್ಯದಲ್ಲಿ ಪ್ರತಿವರ್ಷ ಹೊಸ ರೋಗಿಗಳು ಪತ್ತೆಯಾಗುತ್ತಿದ್ದಾರೆ. ಬಡ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ದೊರೆಯದ ಕಾರಣ, ಅಕಾಲಿಕ ಮರಣಕ್ಕೆ ತುತ್ತಾಗುತ್ತಿದ್ದರು. ಕ್ಯಾನ್ಸರ್ ರೋಗಕ್ಕೆ ತುತ್ತಾಗುವವರ ಸಂಖ್ಯೆಯಲ್ಲಿ ತಮಿಳುನಾಡಿನ ನಂತರದ ಸ್ಥಾನವನ್ನು ಕರ್ನಾಟಕ ಪಡೆದಿದೆ. ಈ ಕಾಯಿಲೆ ತಕ್ಷಣ ಪತ್ತೆಯಾದರೆ ಗುಣಪಡಿಸುವ ಸಾಧ್ಯತೆಯಿದ್ದು, ಪತ್ತೆಯಾಗದ ಸಂದರ್ಭದಲ್ಲಿ ಮಾರಣಾಂತಿಕವಾಗಿಯೂ ಪರಿಣಮಿಸಬಹುದು. ಆದರೆ ಆಧುನಿಕ ಔಷದೋಪಚಾರಗಳು ಲಭ್ಯವಿದ್ದರೂ, ದುಬಾರಿಯಾಗಿದೆ ಎಂದರು.

    ವೈದ್ಯಕೀಯ ಸೇವೆ ರಾಜ್ಯದ ಬಡವರಿಗೂ ದೊರೆಯಬೇಕು:

    ಭಾರತದಲ್ಲಿ ಸುಮಾರು 100 ಕೋಟಿ ಜನರಿಗೆ ಬಡತನದಿಂದಾಗಿ ಚಿಕಿತ್ಸೆ ಪಡೆಯುವ ಶಕ್ತಿಯಿರುವುದಿಲ್ಲ. 2013 ರಲ್ಲಿ ರಾಜ್ಯದ ಬಡವರ ಸಂಕಷ್ಟಕ್ಕೆ ಸ್ಪಂದಿಸಲು ನಮ್ಮ ಸರ್ಕಾರ 5 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದೆ. 2023ರಲ್ಲಿ ರಾಜ್ಯದ ಯಾವ ಬಡವರೂ ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ 10 ಕೆಜಿ ಅಕ್ಕಿಯನ್ನು ಉಚಿತವಾಗಿ ಸರ್ಕಾರ ನೀಡುತ್ತಿದೆ. ಹಸಿವು ಮುಕ್ತ ರಾಜ್ಯ ನಿರ್ಮಿಸುವ ಜೊತೆಗೆ ಶಿಕ್ಷಣ, ವೈದ್ಯಕೀಯ ಸೇವೆ ರಾಜ್ಯದ ಪ್ರತಿಯೊಬ್ಬರಿಗೂ ದೊರೆಯಬೇಕೆಂಬುದು ಸರ್ಕಾರದ ಗುರಿ. ಡಾ.ಬಿ.ಆರ್.ಅಂಬೇಡ್ಕರ್ ರವರು ತಿಳಿಸಿದಂತೆ ಸಮಾಜದಲ್ಲಿ ಸಮಾನತೆ ನೆಲೆಸಬೇಕಾದರೆ ಜಾತಿ ವ್ಯವಸ್ಥೆ ತೊಲಗಬೇಕು ಮತ್ತು ಆರ್ಥಿಕ, ಸಾಮಾಜಿಕ ಸಮಾನತೆ ಸಾಧಿಸಬೇಕು ಎಂದರು. 2013ರಲ್ಲಿ ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಮೈಸೂರಿನಲ್ಲಿ ಜಿಲ್ಲಾ ಆಸ್ಪತ್ರೆ ಇರಲಿಲ್ಲ. ಈ ಪ್ರಮುಖ ಜಿಲ್ಲೆಯಲ್ಲಿ ಸಕಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಿದೆ ಎಂದರು.

    ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿಯುಳ್ಳ ವೈದ್ಯರಿದ್ದಾರೆ:

    240 ಕೇಂದ್ರಗಳಲ್ಲಿ ಡಯಾಲಿಸಿಸ್ ಕೇಂದ್ರಗಳಿವೆ. ಡಯಾಲಿಸಿಸ್ ಎನ್ನುವುದು ಈಗ ಸಾಮಾನ್ಯ ರೋಗ ಎಂಬಂತಾಗಿದೆ. ಇದಕ್ಕೆ ದುಬಾರಿ ಬೆಲೆಯಾಗಿರುವುದರಿಂದ ಖಾಸಗಿ ಆಸ್ಪತ್ರೆಗೆ ಬಡ ಜನರು ಹೋಗಲಾಗುವುದಿಲ್ಲ. ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷಗಳಷ್ಟು ಕೊಟ್ಟರೂ ಸಂಪೂರ್ಣ ಚಿಕಿತ್ಸೆಗೆ ಅದು ಸಾಲುವುದಿಲ್ಲ. ಇತ್ತೀಚೆಗೆ ಜನರಲ್ಲಿ ಖಾಸಗಿ ಆಸ್ಪತ್ರೆಗಳಿಗೆ ಹೋದರೆ ಮಾತ್ರ ಖಾಯಿಲೆ ವಾಸಿಯಾಗುತ್ತದೆ ಎಂಬ ಭಾವನೆ ಇದೆ. ಆದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆಚ್ಚು ಅನುಭವ ಮತ್ತು ಪರಿಣಿತಿ ಇರುವ ವೈದ್ಯರಿದ್ದಾರೆ ಎಂದರು. ಜನರು ಸರ್ಕಾರಿ ಆಸ್ಪತ್ರೆಗಳಲ್ಲಿಯೂ ಖಾಯಿಲೆ ವಾಸಿಯಾಗುತ್ತದೆ ಎಂದು ಅರಿಯಬೇಕು. ಜಯದೇವ ಆಸ್ಪತ್ರೆಗಳಲ್ಲಿ ನೀಡುವ ಚಿಕಿತ್ಸೆ ಯಾವ ಖಾಸಗಿ ಆಸ್ಪತ್ರೆಗೂ ಕಡಿಮೆಯಿಲ್ಲ ಎಂದರು.

    ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು:

    ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. ಅದು ಇದ್ದರೆ ರೋಗ ಹರಡುವುದು ಕಡಿಮೆಯಾಗುತ್ತದೆ. ಸಂಸ್ಥೆಯ ಮುಖ್ಯಸ್ಥರು ಒಳ್ಳೆಯವರಿದ್ದರೆ ಒಳ್ಳೆ ಕೆಲಸಗಳಾಗುತ್ತದೆ. ಸರ್ಕಾರ ಶಿಕ್ಷಣ, ಆರೋಗ್ಯ, ಅಭಿವೃದ್ಧಿ ಕಾಮಾಗಾರಿಗಳು, ಜನರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸಗಳಿಗೆ ಅನುದಾನ ನೀಡುತ್ತದೆ. ಪಂಚ ಗ್ಯಾರಂಟಿಗಳು ನೇರವಾಗಿ ಫಲಾನುಭವಿಗಳಿಗೆ ತಲಪುತ್ತಿದೆ. ಇದು ಎಲ್ಲಾ ಧರ್ಮ, ಜಾತಿ, ಪಕ್ಷಗಳಿಗೂ ಮುಕ್ತವಾಗಿದೆ ಎಂದರು. ರೋಗ ನ್ನುವುದು ಜಾತಿ, ಧರ್ಮ ನೋಡಿಕೊಂಡು ಬರುವುದಿಲ್ಲ. ಸಮಾಜದ ಬಡವರಿಗೆ ಹೆಚ್ಚು ಒತ್ತು ಕೊಟ್ಟು ಕೆಲಸ ಮಾಡುವುದು ಅಗತ್ಯ ಎಂದರು.

    ಕೀಮೋಥೆರಪಿ ಕೇಂದ್ರಗಳ ಸದುಪಯೋಗವಾಗಬೇಕು:

    ನಿಮ್ಹಾನ್ಸ್ ಕೇಂದ್ರ ಮೈಸೂರು ನಗರದಲ್ಲಿ ಆಗಬೇಕೆಂಬ ಕಾರಣದಿಂದ ಬಾರಿಯ ಬಜೆಟ್ ನಲ್ಲಿ ಅನುದಾನವನ್ನು ಮೀಸಲಿರಿಸಲಾಗಿದೆ. ಶೇ 60% ರೋಗಿಗಳು ಚಿಕಿತ್ಸೆಗಾಗಿ ನೂರು ಕಿಮೀ ವರೆಗೆ ಪ್ರಯಾಣ ಮಾಡಬೇಕಾದ ಸ್ಥಿತಿ ಇದೆ. ಅದಕ್ಕಾಗಿ ನಾವು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕೀಮೋಥೆರಪಿ ಸೌಲಭ್ಯವನ್ನು ಒದಗಿಸುತ್ತಿದ್ದೇವೆ. ಇದರ ಲಾಭವನ್ನು ಮೂತ್ರಪಿಂಡ ಖಾಯಿಲೆಗೆ ತುತ್ತಾದವರು ಪಡೆದುಕೊಳ್ಳಬೇಕು ಎಂದರು.

    ಗ್ಯಾರಂಟಿಗಳಿಂದ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯ:

    ಕೆಸ್ತೂರು ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಯಂದಾಗಿ ಔಷಧ ಖರೀದಿಸಲು ಹಾಗೂ ಚಿಕಿತ್ಸೆ ಪಡೆಯಲು ಉಚಿತವಾಗಿ ಪ್ರಯಾಣಿಸಲು ಸಾಧ್ಯವಾಗುತ್ತಿದೆ ಎಂದು ಹೇಳಿದ್ದನ್ನು ಉಲ್ಲೇಖಿಸಿದ ಮುಖ್ಯಮಂತ್ರಿಗಳು ಗೃಹಲಕ್ಷ್ಮೀ ಯೋಜನೆಯಡಿ 1. 22 ಕೋಟಿ ಮಹಿಳೆಯರಿಗೆ ತಿಂಗಳಿಗೆ 2000 ರೂ.ಗಳನ್ನು ನೀಡುತ್ತಿದ್ದು, 1.63 ಕೋಟಿ ಮನೆಗಳಿಗೆ ಗೃಹಜ್ಯೋತಿ ಮೂಲಕ ಉಚಿತ ವಿದ್ಯುತ್ ನೀಡುತ್ತಿರುವುದರಿಂದ ಜನತೆಗೆ ಅನುಕೂಲವಾಗುತ್ತಿದೆ ಎಂದರು. ಇದರಿಂದಾಗಿ ಬಡವರಿಗೆ ಶಕ್ತಿ ತುಂಬಲಾಗಿದೆ. ಸಮಸಮಾಜ ನಿರ್ಮಾಣ ಮಾಡಲು ಇದರಿಂದ ಸಾಧ್ಯವಾಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಸಮ ಸಮಾಜ ನಿರ್ಮಿಸಲು ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದರು. ಗ್ಯಾರಂಟಿ ಯೋಜನೆಗಳನ್ನು ಟೀಕಿಸುವವರ ಮಾತನ್ನು ನಂಬಬೇಡಿ, ಅದು ಕೇವಲ ಸುಳ್ಳು ಎಂದು ಮುಖ್ಯಮಂತ್ರಿಗಳು ಸಲಹೆ ನೀಡಿದರು.

    ಉಳಿದ ಜಿಲ್ಲೆಗಳಲ್ಲಿ ಶೀಘ್ರವೇ ಕೀಮೋಥೆರಪಿ ಕೇಂದ್ರ ತೆರೆಯಲಾಗುವುದು:

    ಕೀಮೋಥರೆಪಿ ಸೌಲಭ್ಯಗಳಿಲ್ಲದೇ ಇರುವ ಜಿಲ್ಲೆಗಳಲ್ಲಿ ಶೀಘ್ರವಾಗಿಯೇ ಕೀಮೋಥೆರಪಿ ಕೇಂದ್ರಗಳನ್ನು ತೆರೆಯಲಾಗುವುದು ಎಂದ ಮುಖ್ಯಮಂತ್ರಿಗಳು ಕ್ಯಾನ್ಸರ್ ಖಾಯಿಲೆ ಬಂದವರು ಧೃತಿಗೆಬೇಕಾದ ಅಗತ್ಯವಿಲ್ಲ ಎಂದು ಧೈರ್ಯ ತುಂಬಿದರು. ತಾವೂ ಕೂಡ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ 25 ವರ್ಷಗಳ ಹಿಂದೆ ಒಳಗಾಗಿದ್ದನ್ನು ನೆನೆದ ಮುಖ್ಯಮಂತ್ರಿಗಳು ಇನ್ನೂ 25 ವರ್ಷಗಳ ಕಾಲ ನಾನು ಬದುಕುತ್ತೇನೆ ಎಂದರು. ನಾವು ಮಾನಸಿಕವಾಗಿ ಎಷ್ಟು ಗಟ್ಟಿಯಾಗಿರತ್ತೇವೋ ಅಷ್ಟರ ಮಟ್ಟಿಗೆ ನಮ್ಮ ಆಯಸ್ಸು ಗಟ್ಟಿಯಾಗಿರುತ್ತದೆ. ನಮ್ಮ ಆಯಸ್ಸು ಮುಗಿದುಹೋಯಿತು ಎಂದು ಯಾರು ಅಂದುಕೊಳ್ಳವಬಾರದು ಎಂದು ಕಿವಿಮಾತು ಹೇಳಿದರು.

    ಆರೋಗ್ಯಕರ ಜೀವನ ಮುಖ್ಯ:

    ಈ ಹಿಂದೆ, ಜನರಲ್ಲಿ ಕ್ಷಯರೋಗವೂ ಪತ್ತೆಯಾಗದೇ ಮಾರಣಾಂತಿಕವಾಗಿತ್ತು. ಆದರೆ ಈಗ ಆಧುನಿಕ ಸೌಲಭ್ಯಗಳಿಂದ ಇಂತಹ ರೋಗಗಳಿಂದ ಗುಣಮುಖರಾಗಬಹುದಾಗಿದೆ. ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು.ರೋಗಗಳನ್ನು ಮುಂಚಿತವಾಗಿ ಪತ್ತೆಹಚ್ಚಲು ಅನುಕೂಲವಾಗುತ್ತದೆ. ಆಗಮಾತ್ರ ಆರೋಗ್ಯಕರ ಜೀವನ ನಡೆಸಲು ಸಾಧ್ಯ. ಆರೋಗ್ಯ ಸದೃಢವಾಗಿದ್ದರೆ, ದೇಶದ ಅಭಿವೃದ್ಧಿಯಲ್ಲಿ ಜನರೂ ಕೊಡುಗೆ ನೀಡಬಹುದು. ಜೀವನ ಶೈಲಿ ಮತ್ತು ಆಹಾರ ಪದ್ಧತಿಯ ಬಗ್ಗೆ ಗಮನ ಹರಿಸಿ ಎಂದು ಜನರಿಗೆ ಕಿವಿಮಾತು ಹೇಳಿದರು.

    Post Views: 6

    Demo
    Share. Facebook Twitter LinkedIn Email WhatsApp

    Related Posts

    Road Accident: ರಸ್ತೆ ಅಪಘಾತದಲ್ಲಿ ಬ್ಯಾಂಕ್ ಮ್ಯಾನೇಜರ್ Spot Death!

    May 23, 2025

    ಜನೌಷಧ ಕೇಂದ್ರ ತೆರವು ವಿಚಾರ: ಇದರಲ್ಲಿ ರಾಜಕೀಯ ದುರುದ್ದೇಶವಿಲ್ಲ ಎಂದ ಶರಣ್ ಪ್ರಕಾಶ್ ಪಾಟೀಲ್!

    May 23, 2025

    ಕಾಡಾನೆ ದಾಳಿ: ಮಹಿಳೆ ಸ್ಥಳದಲ್ಲೇ ದುರ್ಮರಣ, ಮೃತರ ಕುಟುಂಬಕ್ಕೆ 20 ಲಕ್ಷ ಪರಿಹಾರ!

    May 23, 2025

    ನ್ಯಾಷನಲ್ ಹೆರಾಲ್ಡ್ ED ಚಾರ್ಜ್‌ಶೀಟ್:‌ ಎಲ್ಲಾ ತನಿಖೆಗೂ ಸಿದ್ಧ ಎಂದ ಡಿಕೆಶಿ

    May 23, 2025

    ಜನಾಕ್ರೋಶ ಕೇವಲ ರಾಜಕೀಯವಾಗಿಯೇ ಹೊರತು, ಜನರಲ್ಲಿ ಆಕ್ರೋಶ ಇಲ್ಲ: ಸಿಎಂ ಸಿದ್ದರಾಮಯ್ಯ

    May 23, 2025

    ತಮನ್ನಾನೂ ಬೇಡ, ಸುಮನ್ನಾನೂ ಬೇಡ. ಬೇಕಿದ್ರೆ ನಾನೇ ಉಚಿತವಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್

    May 23, 2025

    ಮದ್ದೂರು ನಗರಸಭೆಯಾಗಿ ಮೇಲ್ದರ್ಜೆಗೆ: CM, DCMಗೆ ಅಭಿನಂದನೆ ಸಲ್ಲಿಸಿದ ಶಾಸಕ ಕೆ.ಎಂ.ಉದಯ್

    May 23, 2025

    ಡಿಕೆಶಿಗೆ ಅದ್ಧೂರಿ ವೆಲ್‌ ಕಂ : ಕೈʼ ಕಾರ್ಯಕರ್ತರಿಗೆ ಸೇನೆಗೆ ಫ್ರೀ ಪೆಟ್ರೋಲ್ ಭಾಗ್ಯ..! (video)

    May 23, 2025

    ಆಲಮಟ್ಟಿ ಅಣೆಕಟ್ಟು ಎತ್ತರ 524 ಮೀ.ಗೆ ಹೆಚ್ಚಿಸಲು ಅಧಿಸೂಚನೆ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ: ಡಿ.ಕೆ. ಶಿವಕುಮಾರ್

    May 23, 2025

    ರಾಮನಗರ ಮರುನಾಮಕರಣ: ರಾಜ್ಯ ಸರ್ಕಾರಕ್ಕೆ ತೀರ್ಮಾನಿಸುವ ಅಧಿಕಾರವಿದೆ: ಸಿಎಂ ಸಿದ್ದರಾಮಯ್ಯ

    May 23, 2025

    ಅವನೊಬ್ಬ ಮೆಂಟ್ಲು.. ಮಾನಸಿಕ ಆರೋಗ್ಯ ಹದಗೆಟ್ಟಿರಬೇಕು: ಹೇಳಿದ್ಯಾರು ಗೊತ್ತಾ..?

    May 23, 2025

    ನ್ಯಾಷನಲ್ ಹೆರಾಲ್ಡ್’ಗೆ ರಾಜಾರೋಷವಾಗಿ 25 ಲಕ್ಷ ಕೊಟ್ಟಿದ್ದೇವೆ: ಡಿ.ಕೆ.ಶಿವಕುಮಾರ್

    May 23, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.