ಕಾರವಾರ : ಮಾಂಸಕ್ಕಾಗಿ ಗರ್ಭ ಧರಿಸಿದ್ದ ಗೋವನ್ನು ಹತೈಗೈದಿರುವ ಅಮಾನವೀಯ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಬಳಿಯ ಕುಕನೀರ್ ವೆಂಕಟಾಪುರ ಹೊಳೆಯ ದಂಡೆಯ ಬಳಿ ನಡೆದಿದೆ.
ಗೋವನ್ನು ಕೊಂದು ಹೊಟ್ಟೆಯಲ್ಲಿದ್ದ ಮಾಂಸವನ್ನು ತೆಗೆದುಕೊಂಡು, ಕರುವಿನ ಬ್ರೂಣ ಮತ್ತು ಅಂಗಾಂಗಳನ್ನು ಒಂದು ಗೋಣಿ ಚೀಲದಲ್ಲಿ ಸುತ್ತಿ ಎಸೆದು ಹೋಗಿದ್ದಾರೆ. ಬೀದಿ ನಾಯಿಯೊಂದು ಚೀಲವನ್ನು ಎಳೆದುತಂದಾಗ ಖದೀಮರ ವಿಕೃತಿ ಬೆಳಕಿಗೆ ಬಂದಿದೆ.
ಗರ್ಭಿಣಿ ಹಸುವಿನ ತಲೆ ಕಡಿದು ಮಾಂಸ ಕದ್ದೊಯ್ದಿದ್ದ ಕೇಸ್ ಗೆ ಟ್ವಿಸ್ಟ್: ತನಿಖೆ ವೇಳೆ ಶಾಕಿಂಗ್ ವಿಚಾರ ಬೆಳಕಿಗೆ!
ಘಟನಾ ಸ್ಥಳಕ್ಕೆ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಹೊನ್ನಾವರದಲ್ಲಿ ಇಂತದ್ದೇ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿಗಳನ ಕಾಲಿಗೆ ಗುಂಡುಹಾರಿಸಿ ಬಂಧಿಸಿದ್ದರು. ಆ ಘಟನೆ ಮಾಸುವ ಮುನ್ನವೇ ಭಟ್ಕಳದಲ್ಲಿ ಮತ್ತೊಂದು ಘಟನೆ ನಡೆದಿದೆ.