ಮೈಸೂರು: ಪ್ರಸಿದ್ದ ಕ್ಷೇತ್ರ ಚಾಮುಂಡಿ ಬೆಟ್ಟದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಹೊರ ರಾಜ್ಯದ ಯುಕವರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕಾರ್ ಘಟನೆ ಸಂಬಂಧ ಸಾಮಾಜಿಕ ಜಾಲಾತಾಣದಲ್ಲಿ ಪೋಸ್ಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ.
ಚಾಮುಂಡಿ ಬೆಟ್ಟದಲ್ಲಿ ಹೊರ ರಾಜ್ಯದ ಕೆಲ ಯುವಕರು ಸಾರ್ವಜನಿಕ ಸ್ಥಳದಲ್ಲಿಯೇ ಬಟ್ಟೆ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದಾರೆ. ಇದರಿಂದ ಬೇಸತ್ತ ಜನರು, ಅವರ ಫೋಟೋಗಳನ್ನು ತೆಗೆದು, ಫೋಟೋಗಳ ಸಮೇತ ಪೊಲೀಸರಿಗೆ ದೂರು ನಿಡಿದ್ದಾರೆ. ಬಳಿಕ ಚಾಮುಂಡಿ ಬೆಟ್ಟ ಠಾಣೆ ಪೊಲೀಸರು ಯುವಕರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಮಗಳ ಸ್ನೇಹಿತೆಯನ್ನು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
ವಿಚಾರಣೆ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಅಸಭ್ಯವಾಗಿ ವರ್ತಿಸದಂತೆ ಯುವಕರಿಗೆ ತಿಳುವಳಿಕೆ ಹೇಳಿದ್ದು, ಅವರಿಂಧ ಮುಚ್ಚಳಿಕೆ ಪತ್ರ ಬರೆಸಿಕೊಂಡು ಬಳಿಕ ಬಿಟ್ಟಿದ್ದಾರೆ.