ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಆರ್ ರಸಿಬಿ ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 11 ರನ್ಗಳ ಅಂತರದಿಂದ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಆರ್ಸಿಬಿ 14 ವರ್ಷಗಳ ಬರವನ್ನು ಕೊನೆಗೊಳಿಸಿತು. ಈ ಪಂದ್ಯದಲ್ಲಿ 205 ರನ್ಗಳನ್ನು ಗಳಿಸಿದ ಆರ್ಸಿಬಿ ತನ್ನ ಇತಿಹಾಸದಲ್ಲಿ 205 ರನ್ಗಳನ್ನು ಗಳಿಸಿದ ಆರು ಪಂದ್ಯಗಳಲ್ಲಿ ಎರಡು ಪಂದ್ಯಗಳಲ್ಲಿ ಮಾತ್ರ ಗೆದ್ದಿದೆ ಎಂಬುದು ಗಮನಾರ್ಹ.
ನಿವೃತ್ತ ಡಿಜಿ,ಐಜಿಪಿ ಓಂ ಪ್ರಕಾಶ್ ಕೊಲೆ ಕೇಸ್: ಆರೋಪಿತೆ ಪಲ್ಲವಿ 7 ದಿನ ಸಿಸಿಬಿ ಕಸ್ಟಡಿಗೆ.. ತನಿಖೆ ಚುರುಕು!
ಇನ್ನೂ ಸತತ ಮೂರು ಪಂದ್ಯಗಳಲ್ಲಿ ರಾಜಸ್ಥಾನ್ ತಾನು ಮಾಡಿದ ತಪ್ಪುಗಳಿಂದಲೇ ಸೋತಿದೆ. ಆರ್ಸಿಬಿ ವಿರುದ್ಧದ ಪಂದ್ಯದಲ್ಲೂ ರಾಜಸ್ಥಾನ್ ಅದೇ ತಪ್ಪನ್ನು ಮಾಡಿ ಸೋತಿತ್ತಾದರೂ ಇಲ್ಲಿ ಆರ್ಸಿಬಿ ವಿಕೆಟ್ ಕೀಪರ್ ಜಿತೇಶ್ ಶರ್ಮಾ ತೋರಿದ ಚಾಣಾಕ್ಷತೆ ಆರ್ಸಿಬಿ ಗೆಲುವಿಗೆ ಪ್ರಮುಖ ಕಾರಣವಾಯಿತು.
ಆರ್ಸಿಬಿ ನೀಡಿದ 205 ರನ್ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್ಗೆ ನಿರೀಕ್ಷೆಗೂ ಮೀರಿದ ಆರಂಭ ನೀಡುವಲ್ಲಿ ಆರಂಭಿಕರು ಯಶಸ್ವಿಯಾದರು. ತಂಡ ಕೇವಲ 9 ಓವರ್ಗಲ್ಲಿ 3 ವಿಕೆಟ್ ಕಳೆದುಕೊಂಡು 110 ರನ್ ಕಲೆಹಾಕಿತು. ಆದಾಗ್ಯೂ ಮಧ್ಯಮ ಕ್ರಮಾಂಕದ ಬ್ಯಾಟರ್ಗಳ ವೈಫಲ್ಯ ರಾಜಸ್ಥಾನ್ಗೆ ಮತ್ತೊಂದು ಸೋಲಿನ ಆಘಾತ ನೀಡಿತು. ಅದರಲ್ಲೂ 18ನೇ ಓವರ್ನಲ್ಲಿ 22 ರನ್ ಕಲೆಹಾಕಿ ರಾಜಸ್ಥಾನ್ಗೆ ಗೆಲುವಿನ ಭರವಸೆ ಮೂಡಿಸಿದ್ದ ಧೃವ್ ಜುರೇಲ್ 19ನೇ ಓವರ್ನಲ್ಲಿ ವಿಕೆಟ್ ಒಪ್ಪಿಸಿದ್ದು ತಂಡವನ್ನು ಸೋಲಿನ ದವಡೆಗೆ ಸಿಲುಕಿಸಿತು. ಆದಾಗ್ಯೂ ಈ ವಿಕೆಟ್ನ ಕ್ರೆಡಿಟ್ ಆರ್ಸಿಬಿ ವಿಕೆಟ್ ಕೀಪರ್ ಜಿತೇಶ್ ಶರ್ಮಾಗೆ ಸಲ್ಲಬೇಕು.
ವಾಸ್ತವವಾಗಿ ರಾಜಸ್ಥಾನ್ ಗೆಲುವಿಗೆ ಕೊನೆಯ 3 ಓವರ್ಗಳಲ್ಲಿ 40 ರನ್ ಬೇಕಾಗಿದ್ದವು. ಈ ವೇಳೆ ಆರ್ಸಿಬಿ ಮೇಲುಗೈ ಸಾಧಿಸಿತ್ತು. ಆದರೆ 18ನೇ ಓವರ್ ಬೌಲ್ ಮಾಡಿದ ಭುವನೇಶ್ವರ್ ಬರೋಬ್ಬರಿ 22 ರನ್ ಬಿಟ್ಟುಕೊಟ್ಟರು. ಈ ಓವರ್ನಲ್ಲಿ ಜುರೇಲ್ 1 ಸಿಕ್ಸರ್ ಹಾಗೂ 2 ಬೌಂಡರಿ ಬಾರಿಸಿ ಆರ್ಸಿಬಿಗೆ ಕಂಟಕವಾಗಿದ್ದರು. ಕೊನೆಯ 2 ಓವರ್ಗಳಲ್ಲಿ 18 ರನ್ ಬೇಕಿದ್ದಾಗ ವಿಜಯಲಕ್ಷ್ಮಿ ರಾಜಸ್ಥಾನ್ ಪರ ವಾಲಿದ್ದಂತೆ ಕಾಣುತ್ತಿತ್ತು. ಆದರೆ 19ನೇ ಓವರ್ನಲ್ಲಿ ದಾಳಿಗಿಳಿದ ಹೇಜಲ್ವುಡ್ ಪಂದ್ಯವನ್ನು ಮತ್ತೆ ಆರ್ಸಿಬಿಯತ್ತ ತಿರುಗಿಸಿದರು.