ರಾಯಚೂರು : ರಾಯಚೂರಿನಲ್ಲಿ ಗ್ರಾನೈಟ್ ಗಣಿಯಲ್ಲಿ ಸಿಡಿಮದ್ದು ಸ್ಫೋಟಗೊಂಡಿದ್ದು, ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೊಬ್ಬ ಕಾರ್ಮಿನಿಗೆ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆ ಲಿಂಗಸೂಗೂರು ತಾಲೂಕಿನ ಮಾಕಾಪುರ ಗ್ರಾಮದಲ್ಲಿರುವ ಗ್ರಾನೈಟ್ ಗಣಿಯಲ್ಲಿ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಇಲಕಲ್ ತಾಲೂಕಿನ ಮೆಣಸಿಗೆರಿ ಗ್ರಾಮದ ಕಾರ್ಮಿಕ ವೆಂಕಟೇಶ(38) ಸಾವನ್ನಪ್ಪಿದ್ದು, ಮತ್ತೊಬ್ಬ ಕಾರ್ಮಿಕ ಮಾಲಿಂಗಪ್ಪ ಎಂಬಾತನಿಗೆ ಗಂಭೀರ ಗಾಯಗೊಂಡಿದೆ.
ಹೋಟೆಲ್ನಲ್ಲಿ ಸ್ಪಾ ಹೆಸರಲ್ಲಿ ವೇಶ್ಯವಾಟಿಕೆ ; ಪೊಲೀಸರ ದಾಳಿ, ಮೂವರು ಮಹಿಳೆಯರ ರಕ್ಷಣೆ
ಸಿಡಿಮದ್ದು ಸ್ಫೋಟದಿಂದ ಕಾರ್ಮಿಕನ ಮುಖ ಮತ್ತು ಎದೆ ಭಾಗ ಛಿದ್ರವಾಗಿ ಕಾರ್ಮಿಕ ಸಾವನ್ನಪ್ಪಿದ್ದಾನೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿಯಮ ಗಾಳಿಗೆ ತೂರಿ ಅಕ್ರಮ ಗಣಿಗಾರಿಕೆ ಆರೋಪ ಕೇಳಿ ಬಂದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ಮುದಗಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.