ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕ ಮಳೆ ಹಿನ್ನಲೆ ಕೆ.ಆರ್.ಎಸ್ ಡ್ಯಾಂ ನ ನೀರಿನ ಮಟ್ಟ 100ರ ಗಡಿ ದಾಟಿದೆ. ಡ್ಯಾಂ ನ ಒಳಹರಿವು ಕೂಡ ಮೂರ್ನಾಲ್ಕು ದಿನಗಳಿಂದ ಗಣನೀಯ ಹೆಚ್ಚಳವಾಗಿದೆ.
124.80 ಅಡಿ ಗರಿಷ್ಠ ಮಟ್ಟ ಸಂಗ್ರಹ ಸಾಮರ್ಥ್ಯ ಹೊಂದಿರುವ ಕೆಆರ್ಎಸ್ನಲ್ಲಿ 100.10 ಅಡಿ ನೀರಿದೆ. 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು ಸದ್ಯ 22.222 ಟಿಎಂಸಿ ನೀರು ಸಂಗ್ರಹವಾಗಿದೆ. ಸದ್ಯ ಒಳಹರಿವಿನ ಪ್ರಮಾಣ 19,448 ಕ್ಯುಸೆಕ್ ಇದ್ದು, 670 ಕ್ಯುಸೆಕ್ ಹೊರಹರಿವಿದೆ.
ಗಟ್ಟಿಮುಟ್ಟಾದ ಮೂಳೆ ನಿಮ್ಮದಾಗಬೇಕಾ!? ಹಾಗಿದ್ರೆ ಈ ಬೀಜಗಳನ್ನು ತಿನ್ನುವ ಅಭ್ಯಾಸ ಇಟ್ಟುಕೊಳ್ಳಿ!
ಹಳೆ ಮೈಸೂರು ಭಾಗದ ಜೀವನಾಡಿಯಾದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಅಣೆಕಟ್ಟೆಗೆ ಉತ್ತಮ ಒಳಹರಿವು ಇದ್ದು, ನಾಲ್ಕೇ ದಿನದಲ್ಲಿ 11 ಅಡಿ ಭರ್ತಿಯಾಗಿದೆ. ಇದೇ ರೀತಿ ಮಳೆ ಮುಂದುವರಿದರೆ ಜೂನ್ ಎರಡನೇ ವಾರದಲ್ಲಿ ಡ್ಯಾಂ ಭರ್ತಿಯಾಗುವ ಸಾಧ್ಯತೆಯಿದೆ