ಚಿತ್ರದುರ್ಗ : ರಾಜ್ಯದಲ್ಲಿ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಯಲ್ಲಿ ಅನುತ್ತಿರ್ಣಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕುಡಿನೀರುಕಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ.
ಕೃಪಾ ಎಂಬ ವಿದ್ಯಾರ್ಥಿನಿ ಮೃತ ವಿದ್ಯಾರ್ಥಿನಿಯಾಗಿದ್ದಳು. ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದು ಮನೆಯಲ್ಲಿ ನೇಣಿಗೆ ಕೊರಳೊಡ್ಡಿದ್ದಾಳೆ. ಚಂದ್ರಶೇಖರಪ್ಪ, ವೀಣಾ ದಂಪತಿಯ ಮಗಳಾದ ಕೃಪಾ, ದಾವಣಗೆರೆಯ ಕಾಲೇಜಲ್ಲಿ ವ್ಯಾಸಂಗ ಮಾಡುತ್ತಿದ್ದಳು. ವಿಜ್ಞಾನ ವಿಭಾಗದಲ್ಲಿ ಎರಡು ವಿಷಗಳಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿದ್ದಾಳೆ.
ದ್ವಿತೀಯ ಪಿಯುಸಿ ಫಲಿತಾಂಶ: ಪಾಸಾದವರಿಗೆ ವಿಶ್ ಮಾಡಿ, ಫೇಲ್ ಆದವರಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿ!
ಇನ್ನೂ ಮಗಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಹೊಳಲ್ಕೆರೆ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.