ನವದೆಹಲಿ: ದಕ್ಷಿಣ ಕಾಶ್ಮೀರದ ಪಹಲ್ಗಾಮ್ ಜಿಲ್ಲೆಯ ಬೈಸರನ್ ಹಲ್ಲುಗಾವಲು ಪ್ರದೇಶದಲ್ಲಿ ಕುಟುಂಬ ಸದಸ್ಯರೊಂದಿಗೆ ಕಾಲ ಕಳೆಯುತ್ತಿದ್ದ ಪ್ರವಾಸಿಗರನ್ನು ಗುರಿಯಾಗಿಸಿ ನಡೆಸಿದ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿದಂತೆ 28 ಜನರು ಸಾವನ್ನಪ್ಪಿದ್ದಾರೆ. ಇನ್ನೂ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ದಾಳಿಯ ಬಗ್ಗೆ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Helmet Tips: ಹೆಲ್ಮೆಟ್ ಧರಿಸದಿದ್ದರೆ ದಂಡ: ಖರೀದಿಸುವಾಗ ಈ ಸಲಹೆಗಳು ಕಡ್ಡಾಯ!
“ಘಟನೆ ಬಗ್ಗೆ ಗೃಹ ಮಂತ್ರಿ ಅಮಿತ್ ಶಾ ಅವರೊಂದಿಗೆ ಮಾತನಾಡಿದೆ. ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಾಗೂ ಜಮ್ಮು ಮತ್ತು ಕಾಶ್ಮೀರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ತಾರಿಕ್ ಕರ್ರಾ ಅವರಿಂದ ಮಾಹಿತಿ ಪಡೆದಿದ್ದೇನೆ. ಭಯಾನಕ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸದ್ಯದ ಪರಿಸ್ಥಿತಿ ಬಗ್ಗೆ ವಿಷಯ ತಿಳಿದಿದ್ದೇನೆ. ”
ಘಟನೆಯಲ್ಲಿ ಪ್ರಾಣ ಕಳೆದುಕೊಂಡ ಕುಟುಂಬಗಳಿಗೆ ನ್ಯಾಯ ಸಿಗಬೇಕು. ನಮ್ಮ ಸಂಪೂರ್ಣ ಬೆಂಬಲ ಅವರಿಗಿರಬೇಕು” ಎಂದು ಘಟನೆ ಕುರಿತಂತೆ ಇಂದು ಬೆಳಗ್ಗೆ 6:30 ರ ಸುಮಾರಿಗೆ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್‌ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.