ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಒಡೆಯರಪಾಳ್ಯ ಸಮೀಪದ ಗುಳ್ಯದ ಬಯಲು ಗ್ರಾಮದಲ್ಲಿ ಗಂಡನೇ ತನ್ನ ಪತ್ನಿಯನ್ನು ಚಾಕು ಇರಿದು ಹತ್ಯೆ ಮಾಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.
ಮಾದೇವಿ(28), ಪತಿಯಿಂದ ಕೊಲೆಯಾದ ಗೃಹಿಣಿಯಾಗಿದ್ದಾರೆ. ಕಳೆದ ರಾತ್ರಿ ಪತಿ-ಪತ್ನಿ ನಡುವೆ
ತೀವ್ರ ಮಾತಿನ ಕಲಹ ನಡೆದಿದೆ. ಇದರಿಂದ ಕೋಪಗೊಂಡ ಪತಿ ಭದ್ರ ಎಂಬಾತ ಪತ್ನಿ ಮಾದೇವಿಗೆ ಚಾಕು ಇರಿದು ಹತ್ಯೆ ಮಾಡಿದ್ದಾನೆ. ಘಟನೆ ನಡೆದ ಬಳಿಕ ಸ್ಥಳೀಯರು ಧಾವಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮಾನವ ಆನೆ ಸಂಘರ್ಷ ತಡೆಗಟ್ಟಲು ಅಕ್ಕ ಪಕ್ಕದ ರಾಜ್ಯಗಳ ಸಹಕಾರ ಅಗತ್ಯ: ಸಿಎಂ ಸಿದ್ದರಾಮಯ್ಯ
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿ ಭದ್ರನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರ ತನಿಖೆ ಬಳಿಕ ಕೊಲೆಗೆ ನಿಖರವಾದ ಕಾರಣ ತನಿಖೆಯ ಬಳಿಕ ಮಾತ್ರ ತಿಳಿದು ಬರುವ ನಿರೀಕ್ಷೆಯಿದೆ.