ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಫ್ಯಾನ್ಸ್ ಆಕ್ರೋಶ ಹೊರ ಹಾಕಿದ್ದಾರೆ. ಎಡ್ಜ್‌ಬಾಸ್ಟನ್ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನವೇ ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್ ವಿರುದ್ಧ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.
ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಟೀಂ ಇಂಡಿಯಾದ ಪ್ಲೇಯಿಂಗ್ 11 ನೋಡಿ ಕ್ರಿಕೆಟ್ ತಜ್ಞರಿಂದ ಹಿಡಿದು ಅಭಿಮಾನಿಗಳವರೆಗೆ ಎಲ್ಲರೂ ಅತೃಪ್ತರಾಗಿದ್ದಾರೆ. ಹೀಗಾಗಿ ಅಭಿಮಾನಿಗಳು ಗಂಭೀರ್ ಅವರನ್ನು ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಅತ್ಯಂತ ಕೆಟ್ಟ ಕೋಚ್ ಎಂದು ಜರಿದಿದ್ದಾರೆ. ಗಂಭೀರ್ ವಿರುದ್ಧ ಫ್ಯಾನ್ಸ್ ಗರಂ ಆಗಲು ಕಾರಣವೆನೆಂದರೆ 2ನೇ ಟೆಸ್ಟ್ಗೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್‌ನಲ್ಲಿ ಮೂರು ಬದಲಾವಣೆಗಳನ್ನು ಮಾಡಿದೆ. ಜಸ್ಪ್ರೀತ್ ಬುಮ್ರಾ ತಂಡದಿಂದ ಹೊರಗುಳಿದಿದ್ದು, ಯುವ ಬ್ಯಾಟರ್ ಸಾಯಿ ಸುದರ್ಶನ್ ಅವರನ್ನು ಒಂದು ಪಂದ್ಯದ ನಂತರ ತಂಡದಿಂದ ಕೈಬಿಡಲಾಗಿದೆ. ಅಲ್ಲದೆ ಬುಮ್ರಾ ಬದಲಿಗೆ ಅರ್ಶ್‌ದೀಪ್ ಸಿಂಗ್‌ಗೆ ಏಕೆ ಅವಕಾಶ ನೀಡಲಿಲ್ಲ ಎಂಬುದು ಅಭಿಮಾನಿಗಳ ಪ್ರಶ್ನೆಯಾಗಿದೆ.
ಅರ್ಶ್‌ದೀಪ್ ಸಿಂಗ್ ಅವರನ್ನು ಪ್ಲೇಯಿಂಗ್ ಇಲೆವೆನ್‌ನಲ್ಲಿ ಸೇರಿಸದಿದ್ದಕ್ಕೆ ಅಭಿಮಾನಿಗಳು ತುಂಬಾ ಕೋಪಗೊಂಡಿದ್ದಾರೆ. ಅಭಿಮಾನಿಗಳ ಪ್ರಕಾರ, ಅರ್ಶ್‌ದೀಪ್ ಸ್ವಿಂಗ್ ಬೌಲರ್ ಆಗಿರುವುದರಿಂದ ಈ ಪಂದ್ಯದಲ್ಲಿ ಆಡಲು ಅರ್ಹರಾಗಿದ್ದರು. ಆದಾಗ್ಯೂ ಅವರಿಗೆ ಅವಕಾಶ ನೀಡಲಾಗಿಲ್ಲ. ಹೀಗಾಗಿ ಟೀಂ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಆಯ್ಕೆಯ ವಿಷಯದಿಂದ ಕೋಪಗೊಂಡ ಅಭಿಮಾನಿಯೊಬ್ಬರು ಗೌತಮ್ ಗಂಭೀರ್ ಅವರನ್ನು ಭಾರತದ ಕೆಟ್ಟ ಕೋಚ್ ಎಂದೂ ಜರಿದಿದ್ದಾರೆ. ಕುಲ್ದೀಪ್ ಯಾದವ್‌ಗೂ ಅವಕಾಶ ಸಿಗಬೇಕಿತ್ತು ಎಂದಿರುವ ಅಭಿಮಾನಿ, ಸಾಯಿ ಸುದರ್ಶನ್ ಅವರನ್ನು ಕೈಬಿಟ್ಟ ವಿಷಯದಲ್ಲೂ ಗೌತಮ್ ಗಂಭೀರ್ ಅವರನ್ನು ಟ್ರೋಲ್ ಮಾಡಿದ್ದಾರೆ.