ದೇವನಹಳ್ಳಿ:-ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ವ್ಯಾಪ್ತಿಯಲ್ಲಿ ಭೂ ಸ್ವಾಧೀನ ವಿರೋಧಿಸಿ ಇದೇ ತಿಂಗಳ 25ಕ್ಕೆ ದೇವನಹಳ್ಳಿ ಪಟ್ಟಣದಲ್ಲಿ ಬೃಹತ್ ಹೋರಾಟಕ್ಕೆ ರೈತರು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಪ್ರತಿಭಟನೆಗೂ ಮುನ್ನ ರೈತರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆ ಕೈಬಿಡುವಂತೆ 1200 ದಿನಗಳಿಂದ 13 ಗ್ರಾಮಗಳ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಕೃಷಿ ಭೂ ನೀಡುವುದಿಲ್ಲ ಎಂದು ಹೋರಾಟ ಮಾಡುತ್ತಿದ್ದಾರೆ. ಆದರೆ ಸರ್ಕಾರದಿಂದ ಭೂ ಸ್ವಾಧೀನ ಕೈಬಿಡದ ಹಿನ್ನೆಲೆಯಲ್ಲಿ. ಇದೇ ತಿಂಗಳ 25 ರಂದು ದೇವನಹಳ್ಳಿ ತಹಸೀಲ್ದಾರ್ ಕಛೇರಿಗೆ ಮುತ್ತಿಗೆ ಹಾಕಿ ಹೋರಾಟಕ್ಕೆ ಸಿದ್ಧತೆ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ದೇವನಹಳ್ಳಿ ಟೌನ್ ಪೋಲಿಸರು ರೈತರಿಗೆ ನೋಟಿಸ್ ಕೊಟ್ಟಿದೆ. ನಗರ ವ್ಯಾಪ್ತಿಯಲ್ಲಿ ಪ್ರತಿಭಟನೆ ಮಾಡುವ ಹಾಗಿಲ್ಲ. ಪ್ರತಿಭಟನೆ ನಡೆಸಿದ್ರೆ ಕಾನೂನು ರೀತಿ ಕ್ರಮ ಎಂದು ನೋಟಿಸ್ ನಲ್ಲಿ ಎಚ್ಚರಿಕೆ ಕೊಡಲಾಗಿದೆ.