ನವದೆಹಲಿ: ಇಂದು ಬೆಳಿಗ್ಗೆ ನಡೆದ ಭೀಕರ ಅಫಘಾತ ಸಂಭವಿಸಿದೆ. ನುಹ್ ಹರಿಯಾಣದ ಫಿರೋಜ್ಪುರ್ ಝಿರ್ಕಾದ ಇಬ್ರಾಹಿಂ ಬಾಸ್ ಗ್ರಾಮದ ಬಳಿ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇಯ ಪ್ರದೇಶವನ್ನು ಸ್ವಚ್ಛಗೊಳಿಸುತ್ತಿದ್ದಾಗ ವೇಗವಾಗಿ ಬಂದ ಪಿಕಪ್ ವ್ಯಾನ್ ಡಿಕ್ಕಿ ಹೊಡೆದ ಪರಿಣಾಮ ಆರು ಜನ ಕಾರ್ಮಿಕರು ಸಾವನ್ನಪ್ಪಿದ್ದು, ಇತರ ಐದು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.
ಹೌದು ಶನಿವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಬಳಿಕ ಪಿಕಪ್ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಘಟನೆಯಲ್ಲಿ ಆರು ಮಹಿಳೆಯರು ಸಾವನ್ನಪ್ಪಿದ್ದು,
ಒಬ್ಬ ಪುರುಷ ಸೇರಿದಂತೆ ಐದು ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡ ಕಾರ್ಮಿಕರನ್ನು ಮಂಡಿ ಖೇರಾ ಆಸ್ಪತ್ರೆಗೆ ರವಾನಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಸಾವನ್ನಪ್ಪಿದ ಕಾರ್ಮಿಕರಲ್ಲಿ ಐದು ಮಂದಿ ಖೇರಿ ಕಲಾನ್ ಗ್ರಾಮಕ್ಕೆ ಸೇರಿದವರು ಮತ್ತು ಒಬ್ಬರು ಜಿಮ್ರಾವತ್ ಗ್ರಾಮಕ್ಕೆ ಸೇರಿದವರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.