ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಣ್ಣ ಹಚ್ಚಿ ಬರೋಬ್ಬರಿ 25 ವರ್ಷ ಕಳೆದಿದೆ. ಮೆಜೆಸ್ಟಿಕ್ ಚಿತ್ರದ ಮೂಲಕ ನಾಯಕ ನಟನಾಗಿ ಪಾದಾರ್ಪಣೆ ಮಾಡಿದ ದರ್ಶನ್ ಇಲ್ಲಿವರೆಗೂ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ಕೊಟ್ಟಿದ್ದಾರೆ. ದಚ್ಚು ಡೈಲಾಗ್ ಹೊಡೆಯುತ್ತಾ ತೆರೆಮೇಲೆ ಎಂಟ್ರಿ ಕೊಟ್ರೆ ಅಭಿಮಾನಿಗಳು ಶಿಳ್ಳೆ ಚಪ್ಪಾಳೆ ಹಾಕ್ತಾರೆ. ಅವರ ಅಭಿನಯಕ್ಕೆ ಸೆಲೆಬ್ರಿಟಿಗಳು ಸಲಾಂ ಎನ್ನುತ್ತಾರೆ. ದರ್ಶನ್ ಅವರು ತೆರೆಮೇಲೆ ಚೆನ್ನಾಗಿ ಕಾಣಲು ಕಾರಣ ಅವರ ಮೇಕಪ್ ಆರ್ಟಿಸ್ಟ್..
ಕಳೆದ 25 ವರ್ಷಗಳಿಂದ ದರ್ಶನ್ ಅವರೊಟ್ಟಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಇಂದು ಅಗಲಿದ್ದಾರೆ. ಅವರ ನಿಧನಕ್ಕೆ ದರ್ಶನ್ ಕಂಬನಿ ಮಿಡಿದಿದ್ದಾರೆ. ಹೊನ್ನೆ ಗೌಡ್ರು ಜೊತೆಗಿನ ಫೋಟೋ ಹಂಚಿಕೊಂಡು, ೨೫ ವರ್ಷಗಳಿಂದ ನನ್ನೊಂದಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಇಂದು ಅಗಲಿದ ಸುದ್ಧಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು.ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆ ಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.
೨೫ ವರ್ಷಗಳಿಂದ ನನ್ನೊಂದಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಇಂದು ಅಗಲಿದ ಸುದ್ಧಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು.ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುವ ಶಕ್ತಿ ನೀಡಲಿ. ಹೊನ್ನೆ ಗೌಡರ ಆತ್ಮಕ್ಕೆ ಶಾಂತಿ… pic.twitter.com/68DBpbjqhY
— Darshan Thoogudeepa (@dasadarshan) May 20, 2025