ತಮಿಳುನಾಡು: ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಮಹಿಳಾ ಕಾನ್‌ಸ್ಟೆಬಲ್ ಶವ ಪತ್ತೆಯಾಗಿರುವ ಘಟನೆ ನಾಗಪಟ್ಟಿನಂನಲ್ಲಿ ನಡೆದಿದೆ. ಮಾಯಿಲದುಥುರೈ ಜಿಲ್ಲೆಯ ಮನಕುಡಿಯ ನಿವಾಸಿ ಅಭಿನಯ (29) ಮೃತ ದುರ್ಧೈವಿಯಾಗಿದ್ದು,
ಸಶಸ್ತ್ರ ಮೀಸಲು ಪಡೆಯಲ್ಲಿ ಸಶಸ್ತ್ರ ಕಾವಲುಗಾರರಾಗಿ ನೇಮಿಸಲಾಗಿತ್ತು ಭಾನುವಾರ ಬೆಳಗ್ಗೆ 6 ಗಂಟೆ ಸುಮಾರಿಗೆ ಕಚೇರಿಯ ಆವರಣದಲ್ಲಿ ಗುಂಡು ಹಾರಿರುವ ಶಬ್ದ ಕೇಳಿಬಂದಿತ್ತು ಎಂದು ವರದಿಯಾಗಿದೆ.
ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!
ಕರ್ತವ್ಯದಲ್ಲಿದ್ದ ಮತ್ತೊಬ್ಬ ಕಾನ್‌ಸ್ಟೆಬಲ್ ಸ್ಥಳಕ್ಕೆ ಧಾವಿಸಿ ನೋಡಿದಾಗ ಅಭಿನಯಾ ನೆಲದ ಮೇಲೆ ಬಿದ್ದಿದ್ದು, ಅವರ ಕುತ್ತಿಗೆಯ ಎಡಭಾಗಕ್ಕೆ ಗುಂಡೇಟಿನಿಂದ ರಕ್ತಸ್ರಾವವಾಗುತ್ತಿತ್ತು.
ಸಶಸ್ತ್ರ ಮೀಸಲು ಪೊಲೀಸ್ ಉಪ ವರಿಷ್ಠಾಧಿಕಾರಿ ಮತ್ತು ಇನ್ಸ್‌ಪೆಕ್ಟರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರಾಥಮಿಕ ತನಿಖೆ ಆರಂಭಿಸಿದರು. ಅಭಿನಯ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಾಗಪಟ್ಟಣಂ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ಘಟನೆ ನಡೆದ ಪ್ರದೇಶವನ್ನು ಸೀಲ್ ಮಾಡಲಾಗಿದ್ದು, ವಿಧಿವಿಜ್ಞಾನ ತನಿಖೆ ನಡೆಯುತ್ತಿದೆ. ಗುಂಡಿನ ದಾಳಿಗೆ ಕಾರಣ ಸ್ಪಷ್ಟವಾಗಿಲ್ಲ. ಈ ಘಟನೆ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಎಂಬುದನ್ನು ಪೊಲೀಸರು ದೃಢಪಡಿಸಿಲ್ಲ, ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ.