ಹುಬ್ಬಳ್ಳಿ: ರಾಜ್ಯದ ಎರಡನೇ ಅತಿದೊಡ್ಡ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಗೆ ಬಹುದೊಡ್ಡ ಆರ್ಥಿಕ ಸಂಕಷ್ಟ ಎದುರಾಗಿದೆ. ಅಭಿವೃದ್ಧಿ ಕಾರ್ಯಗಳನ್ನು ಮಾಡದೇ, ಜನರ ಸಮಸ್ಯೆ ಬಗೆಹರಿಸಲು ಸಾಧ್ಯವಾಗದ ಮಟ್ಟಿಗೆ ಆರ್ಥಿಕ ಸಂಕಷ್ಟದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸಿಲುಕಿದೆಯಾ..? ಎಂಬ ಅನುಮಾನ ದಟ್ಟವಾಗಿದೆ.
ಕಳೆದ ಮೂರು ತಿಂಗಳಗಳಿಂದ ಸಿಬ್ಬಂದಿಗಳಿಗಿಲ್ಲ ವೇತನ. ವೇತನವಿಲ್ಲದೇ ನೌಕರರು ಪರದಾಡುವಂತಹ ಸ್ಥಿತಿ ನಿರ್ಮಾಣ. ಇನ್ನೊಂದು ತಿಂಗಳಲ್ಲಿ ಮಹಾನಗರ ಪಾಲಿಕೆ ಮುಚ್ಚುವ ಪರಿಸ್ಥಿತಿ ಬಂದ್ರು ಅಚ್ಚರಿಯಿಲ್ಲ. ಹೌದು.. ಮೂರು ತಿಂಗಳಿಂದ ಕಾಯಂ ಪೌರಕಾರ್ಮಿಕರಿಂದ ಹಿಡಿದು ಆಯುಕ್ತರಿಗೂ ಸರ್ಕಾರದಿಂದ ವೇತನ ಆಗಿಲ್ಲ.
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
ಸರ್ಕಾರದಿಂದ ಕಳೆದ ಮೂರು ತಿಂಗಳಿನಿಂದ ವೇತನದ ಅನುದಾನ ಬಿಡುಗಡೆ ಆಗಿಲ್ಲ. ಇದನ್ನು ಪ್ರಶ್ನಿಸಿ ಪಾಲಿಕೆಯಿಂದ ಪತ್ರ ಬರೆದರೇ, ಪಾಲಿಕೆಯ ಸಾಮಾನ್ಯ ನಿಧಿಯಿಂದ ವೇತನ ನೀಡುವಂತೆ ಸರ್ಕಾರ ಉತ್ತರ ನೀಡಿದ್ದು, ಪಾಲಿಕೆಯ ಚುನಾಯಿತ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
15 ನೇ ಹಣಕಾಸು, ಎಸ್‌ಎಫ್‌ಸಿ ಮುಕ್ತನಿಧಿ, ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ, ಪಿಂಚಣಿ ಬಾಕಿ, ಅಮೃತ ಯೋಜನೆ ಸೇರಿ ರಾಜ್ಯ ಸರ್ಕಾರದಿಂದ ಬರಬೇಕಿದೆ 290 ಕೋಟಿ ರೂಪಾಯಿ ಅನುದಾನ. ಈ ಅನುದಾನಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಕಾರ್ಯದರ್ಶಿಗಳಿಗೆ ಹಲವಾರು ಬಾರಿ ಮನವಿ ಸಲ್ಲಿಸಿದರೂ ಸಿಕ್ಕಿಲ್ಲ ಸ್ಪಂದನೆ. ಬರಬೇಕಾದ ಹಣ ಇದೇ 31 ರೊಳಗೆ ಬಾರದಿದ್ದರೆ ಕಾನೂನು ಸಮರಕ್ಕೆ ಚಿಂತನೆ ನಡೆಸಿದ್ದಾರೆ.
ಒಟ್ಟಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ಪಾಲಿಕೆ ಸದಸ್ಯರು ಮುಂದಾಗಿದ್ದಾರೆ. ಸರ್ಕಾರದ ನಡೆ ಖಂಡಿಸಿ ಸರ್ವ ಪಕ್ಷದ ಸದಸ್ಯರು ರಾಜ್ಯಪಾಲರ ಭೇಟಿಯಾಗಿ ಮನವಿ ಸಲ್ಲಿಸಲು ನಿರ್ಧಾರ ಮಾಡಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.