ಕೋಲಾರ – ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಗೊಬ್ಬರದ ಅಂಗಡಿಗೆ ಬೆಂಕಿ ತಗುಲಿರುವ ಘಟನೆ ಕೋಲಾರದಲ್ಲಿ ನಡೆದಿದೆ. ಕೋಲಾರದ ನೂತನ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದ್ದು, ಶ್ರೀ ಮಾರುತಿ ಫರ್ಟಿಲೈಜರ್ಸ ಅಂಗಡಿಗೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ.
ಇದರಿಂದಾಗಿ ಮಳಿಗೆಯಲ್ಲಿದ್ದ ಲಕ್ಷಾಂತರ ರೂಪಾಯಿ ಬೆಲೆಯ ರಾಸಾಯನಿಕ ಗೊಬ್ಬರ ಹಾಗೂ ಇನ್ನಿತರೆ ಸಾಮಾಗ್ರಿಗಳು ಸುಟ್ಟುಹೋಗಿವೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೋಲಾರ ನಗರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.