ಕೋಝಿಕ್ಕೋಡ್: ಕೇರಳದ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದ್ದು, ನಾಲ್ವರು ರೋಗಿಗಳು ಸಾವನ್ನಪ್ಪಿದ್ದಾರೆ.
ಶುಕ್ರವಾರ ರಾತ್ರಿ ಅವಘಡ ನಡೆದಿದ್ದು, ಕೋಝಿಕ್ಕೋಡ್ ನ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ತುರ್ತು ವಿಭಾಗದಿಂದ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಅಲ್ಲಿದ್ದವರು ತೀವ್ರ ಆತಂಕಕ್ಕೀಡಾದರು. ಯುಪಿಎಸ್ ಕೋಣೆಯಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ಕೂಡಲೇ ಸುಮಾರು 200 ರೋಗಿಗಳನ್ನು ಅವರ ತುರ್ತು ವೈದ್ಯಕೀಯ ಉಪಕರಣಗಳೊಂದಿಗೆ ತುರ್ತು ವಿಭಾಗದಿಂದ ಸ್ಥಳಾಂತರಿಸಲಾಗಿದೆ.
ಶಿರ್ಗಾಂವ್ ದೇವಸ್ಥಾನದಲ್ಲಿ ಕಾಲ್ತುಳಿತ ಪ್ರಕರಣದ ತನಿಖೆ ; ಗೋವಾ ಸಿಎಂ ಪ್ರಮೋದ್ ಸವಾಂತ್
ಈ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಟಿ ಸಿದ್ದಿಕಿ, ಮೃತ ರೋಗಿಗಳ ಕುಟುಂಬಸ್ಥರೊಂದಿಗೆ ಮಾತುಕತೆ ನಡೆಸಿದ್ದು, ಶವಗಳನ್ನು ಸ್ಥಳಾಂತರಿಸಲಾಗುತ್ತಿದೆ. ಬೆಂಕಿ ಹೊತ್ತಿಕೊಂಡು ಹೊಗೆಯಿಂದ ಉಸಿರುಗಟ್ಟಿ ನಾಲ್ವರು ಮೃತಪಟ್ಟಿದ್ದಾರೆ ಎಂದರು.