ಬೆಂಗಳೂರು: ರಿಕ್ಕಿ ರೈ ಮೇಲೆ ಮಧ್ಯರಾತ್ರಿ ರಾಮನಗರ ತಾಲೂಕಿನ ಬಿಡದಿಯ ಅವರ ಮನೆ ಬಳಿಯೇ ಫೈರಿಂಗ್ ಮಾಡಿರುವ ಘಟನೆ ನಡೆದಿದೆ. ಕೂದಳೆಲೆ ಅಂತರದಲ್ಲಿ ರಿಯಲ್ ಎಸ್ಟೇಟ್ ಬ್ಯುಸಿನೆಸ್ ಮ್ಯಾನ್ ರಿಕ್ಕಿ ರೈ ಬಚಾವ್ ಆಗಿದ್ದಾರೆ. ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿಗೆ ಚಿಕಿತ್ಸೆ ಮುಂದುವರೆದಿದೆ. ಇನ್ನೂ ಈ ವಿಚಾರವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
Saffron Milk: ಬಿಸಿ ಬಿಸಿ ಹಾಲಿಗೆ ನೀವು ಕೇಸರಿ ಬೆರೆಸಿ ಕುಡಿದ್ರೆ ಏನಾಗುತ್ತೆ ಗೊತ್ತಾ..?
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಘಟನೆ ನಡೆದಿರೋದು ನನಗೆ ಗೊತ್ತಾಗಿದೆ. ಡಿಟೇಲ್ಸ್ ಕೇಳಿದ್ದೇನೆ. ರಾತ್ರಿ 1.30 ರಿಂದ 2 ಘಂಟೆ ಸಮಯದಲ್ಲಿ ಫೈರಿಂಗ್ ಆಗಿದೆ. ಯಾರು ಮಾಡಿದ್ದಾರೆ, ಯಾಕೆ ಮಾಡಿದ್ದಾರೆ ಅಂತ ಮಾಹಿತಿ ಇಲ್ಲ. ಸದ್ಯಕ್ಕೆ ರಿಕ್ಕಿ ರೈ ಔಟ್‌ಆಫ್ ಡೇಂಜರ್, ಸ್ಥಳದಲ್ಲಿ ಪೊಲೀಸರು ಹೆಚ್ಚು ಸಿಬ್ಬಂದಿ ನಿಯೋಜಿಸಿದ್ದು, ತನಿಖೆ ಮಾಡ್ತಿದ್ದಾರೆ ಎಂದಿದ್ದಾರೆ.