ಮಂಡ್ಯ: KRS ಡ್ಯಾಂ ಕೆಳಗಿನ ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಹಿನ್ನಲೆ ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ನದಿ ಪಾತ್ರದಲ್ಲಿ ಜನರಿಗೆ ನಿರ್ಬಂಧ ಹೇರಲಾಗಿದೆ. ಪ್ರವಾಸಿ ತಾಣದ ನದಿ ಪಾತ್ರದ ಬಳಿ ಸಾರ್ವನಿಕ ಪ್ರವೇಶ ನಿರ್ಬಂಧಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.
ಕೆಆರ್ಎಸ್ ಜಲಾಶಯ ಭರ್ತಿಯಂಚು ತಲುಪಿರುವುದರಿಂದ ಹೊರ ಹರಿವಿನ ಪ್ರಮಾಣವನ್ನು ಯಾವುದೇ ಸಂದರ್ಭದಲ್ಲೂ ಹೆಚ್ಚಿಸಬಹುದು. ಹೀಗಾಗಿ, ಕಾವೇರಿ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗುವ ಸಾಧ್ಯತೆಯಿದೆ ಎಂದು ಜನರಿಗೆ ಕಾವೇರಿ ನೀರಾವರಿ ನಿಗಮ ಮುನ್ನೆಚ್ಚರಿಕೆ ನೀಡಿದೆ.
ಬೆಳಿಗ್ಗೆ ಎದ್ದಾಕ್ಷಣ ಈ ರೀತಿಯ ಲಕ್ಷಣ ಕಂಡುಬಂದ್ರೆ ಇದು ಥೈರಾಯ್ಡ್ ಸಮಸ್ಯೆ ಎಂದರ್ಥ
ಶ್ರೀರಂಗಪಟ್ಟಣ ತಾಲೂಕಿನ ಪ್ರವಾಸಿ ತಾಣಗಳಾದ ಬಲಮುರಿ, ಎಡಮುರಿ, ಸ್ನಾನಘಟ್ಟ, ಸಂಗಮ, ನಿಮಿಷಾಂಭ ದೇಗುಲ ಹಾಗೂ ಘೋಸಾಯ್ ಘಾಟ್ಗೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಶ್ರೀರಂಗಪಟ್ಟಣ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಕಾವೇರಿ ನದಿ ಪಾತ್ರದಲ್ಲಿ ನಡೆಯುವ ಧಾರ್ಮಿಕ ಪಿಂಡ ಪ್ರಧಾನ ಪೂಜೆಗೂ ನಿರ್ಬಂಧ ವಿಧಿಸಲಾಗಿದೆ.