ಯಾದಗಿರಿ:- ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಜನರಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ನಿರಂತರ ಮಳೆಯಾಗುತ್ತಿರುವ ಕಾರಣ ಯಾದಗಿರಿ ಜಿಲ್ಲೆಯ ಜನರಲ್ಲಿ ಪ್ರವಾಹದ ಆತಂಕ ಆರಂಭವಾಗಿದೆ. ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಭೀಮಾ ನದಿ ಹರಿಯುತ್ತಿದ್ದು, ಎರಡೂ ನದಿಗಳಲ್ಲಿ ಒಳಹರಿವು ಹೆಚ್ಚಾಗಿದೆ.
ಭೀಮಾ ನದಿಗೆ ಮೂರು ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಗುರುಸಣಗಿ ಬ್ರೀಜ್ಡ್ ಕಂ ಬ್ಯಾರೇಜ್ನಿಂದ ನೀರು ಬಿಡುಗಡೆ ಮಾಡಲಾಗಿದೆ. ಗುರುವಾರ ಅಥವಾ ಶುಕ್ರವಾರ ಸೊನ್ನಾ ಬ್ಯಾರೇಜ್ನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುವ ಸಾಧ್ಯತೆ ಇದ್ದು, ನದಿ ಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.