ಆಫ್ರಿಕಾದ ನೈಜೀರಿಯಾದಲ್ಲಿ ಭಾರೀ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈ ಮಳೆಯಿಂದ ಉಂಟಾದ ಪ್ರವಾಹವು ಅನೇಕ ಪ್ರದೇಶಗಳನ್ನು ಸಂಪೂರ್ಣವಾಗಿ ಮುಳುಗಿಸಿದೆ. ಈ ಮಳೆಯಿಂದಾಗಿ ಒಂದು ಅಣೆಕಟ್ಟು ಕುಸಿದಿದೆ. ಈ ಪ್ರವಾಹದಲ್ಲಿ 100 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ.
ಕಿತ್ತಳೆ ಹಣ್ಣಿನ ಸಿಪ್ಪೆ ಎಸೆಯದಿರಿ: ಕಹಿಯಾದ್ರೂ ಇದರ ರಸದಲ್ಲಿ ಅಡಗಿದೆ ಆರೋಗ್ಯ ಸಿಹಿ!
ಮಧ್ಯ ನೈಜೀರಿಯಾದ ಮೊಕ್ವಾ ಪಟ್ಟಣದ ಬಳಿಯಿರುವ ಅಣೆಕಟ್ಟು ಭಾರೀ ಮಳೆಯಿಂದಾಗಿ ಕುಸಿದಿದೆ. ಇದರಿಂದಾಗಿ ಪಟ್ಟಣದಲ್ಲಿ ಪ್ರವಾಹ ಉಂಟಾಗಿದೆ. ಈ ಘಟನೆಯಲ್ಲಿ 111 ಜನರು ಸಾವನ್ನಪ್ಪಿದ್ದಾರೆ. ಮೊಕ್ವಾ ಪಟ್ಟಣದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿರುವ ಅಧಿಕಾರಿಗಳು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಎರಡು ದಿನಗಳಿಂದ ನೈಜೀರಿಯಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಸ್ಥಗಿತಗೊಂಡಿದೆ. ಪ್ರವಾಹದಿಂದಾಗಿ ಅನೇಕ ಮನೆಗಳು, ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿವೆ. ರಸ್ತೆಗಳು ಹಾನಿಗೊಳಗಾಗಿವೆ. ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಅವರೆಲ್ಲರೂ ಸರ್ಕಾರಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆಯುತ್ತಿದ್ದಾರೆ. ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳು ಮುಂದುವರೆದಿವೆ.