ಬೆಂಗಳೂರು: ಬೆಂಗಳೂರಿನ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರನ್ನು ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಭೇಟಿಯಾಗಿದ್ದಾರೆ. ಈ ಕುರಿತು ಡಿಸಿಎಂ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನಿಮಗೆ ಪ್ಲಾಸ್ಟಿಕ್ ಬಾಕ್ಸ್ʼನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ..? ಶೀಘ್ರದಲ್ಲೇ ಕ್ಯಾನ್ಸರ್ ಬರುವುದು ಖಚಿತ
ಇಂದು ನನ್ನ ನಿವಾಸದಲ್ಲಿ ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ, ದಿಗ್ಗಜ ಸ್ಪಿನ್ನರ್ ಅನಿಲ್ ಕುಂಬ್ಳೆ ಅವರನ್ನು ಭೇಟಿ ಮಾಡಿದ್ದು ಖುಷಿ ತಂದಿದೆ. ಕರ್ನಾಟಕ ಮತ್ತು ಭಾರತೀಯ ಕ್ರಿಕೆಟ್‌ಗೆ ಅಪಾರವಾದ ಕೊಡುಗೆ ನೀಡಿದ ಹೆಮ್ಮೆಯ ಹೆಮ್ಮೆಯ ಕನ್ನಡಿಗನೊಂದಿಗೆ ಸಂವಾದದಲ್ಲಿ ತೊಡಗಿಸಿಕೊಂಡಿದ್ದು ಸಂತಸವಾಗಿದೆ ಎಂದು ಬರೆದುಕೊಂಡಿದ್ದಾರೆ.
ಇನ್ನೂ ಡಿಸಿಎಂ ಮಾಧ್ಯಮಗಳೊಂದಿಗೆ ಮಾತನಾಡಿದ ಅನಿಲ್ ಕುಂಬ್ಳೆ, ವೈಯುಕ್ತಿಕ ಕೆಲಸದ ನಿಮಿತ್ತ ಡಿಸಿಎಂ ಭೇಟಿ ಆಗಿದ್ದೆ ಎಂದು ಹೇಳಿದರು.