ಬಿಜೆಪಿ ಪಕ್ಷಕ್ಕೆ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ರಾಜೀನಾಮೆ

ಬೆಂಗಳೂರು: ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಎಟಿ ರಾಮಸ್ವಾಮಿ ಅವರು ರಾಜ್ಯಾಧ್ಯಕ್ಷ ವಿಜಯೇಂದ್ರಗೆ  ರಾಜೀನಾಮೆ ಪತ್ರ ಬರೆದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದು, ರಾಜೀನಾಮೆ ಪತ್ರದಲ್ಲಿ ಪರಿಸರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದಾಗಿ ಉಲ್ಲೇಖಿಸಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ರಾಮಸ್ವಾಮಿ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದರು. ಜೆಡಿಎಸ್ ಜತೆ ಮೈತ್ರಿ ಬಳಿಕ ಅಸಮಾಧಾನಗೊಂಡು  ಬಿಜೆಪಿ ಚಟುವಟಿಕೆಗಳಿಂದ ರಾಮಸ್ವಾಮಿ ದೂರ ಉಳಿದಿದ್ದರು. ಇದೀಗ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ತುಮಕೂರಿನಲ್ಲಿ ಕುರುಬ ಸಮುದಾಯದ … Continue reading ಬಿಜೆಪಿ ಪಕ್ಷಕ್ಕೆ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ ರಾಜೀನಾಮೆ