ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿ ಬಳಿಕ ಅಲ್ಪಾವಧಿ ವೀಸಾ ಹೊಂದಿದ್ದ ನಾಲ್ವರು ಪಾಕ್ ಪ್ರಜೆಗಳನ್ನು ಗಡಿಪಾರು ಮಾಡಲಾಗಿದೆ. ಇನ್ನೂ ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕ್ ಪ್ರಜೆಗಳು ಇನ್ನೂ ಕರ್ನಾಟಕದಲ್ಲೇ ಇದ್ದಾರೆ.
ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಕಾರ್ಯಾಚರಣೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕ್ ಪ್ರಜೆಗಳು ವಾಸವಾಗಿದ್ದಾರೆ ಎಂದು ಪತ್ತೆಯಾಗಿದೆ. 5 ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವೀಸಾದಡಿ ರಾಜ್ಯದಲ್ಲಿದ್ದಾರೆ. ಇವರಿಗೆ ಏ.29ರವರೆಗೆ ಮಾತ್ರ ದೇಶದಲ್ಲಿರಲು ಕೇಂದ್ರ ವಿನಾಯ್ತಿ ನೀಡಿದೆ.
ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆ ; ತುರ್ತು ಪರಿಸ್ಥಿತಿ ಘೋಷಣೆ
ರಾಜ್ಯದಲ್ಲಿ ಅತಿ ಹೆಚ್ಚು ಪಾಕಿಸ್ತಾನಿ ಪ್ರಜೆಗಳು ಉತ್ತರ ಕನ್ನಡ ಜಿಲ್ಲೆಯಲ್ಲಿದ್ದಾರೆ. ಭಟ್ಕಳದಲ್ಲಿ 14 ಹಾಗೂ ಕಾರವಾರದಲ್ಲಿ ಒಬ್ಬರು ಸೇರಿ ಒಟ್ಟಾರೆ 15 ಮಂದಿ ವಾಸವಾಗಿದ್ದಾರೆ.
ಇನ್ನೊಂದೆಡೆ ದಾವಣಗೆರೆಯಲ್ಲಿ ಒಬ್ಬ ಪಾಕಿಸ್ತಾನ ವಿದ್ಯಾರ್ಥಿ ಶಿಕ್ಷಣದ ವೀಸಾ ಮೇಲೆ ಭಾರತಕ್ಕೆ ಬಂದಿದ್ದಾರೆ. ದಾವಣಗೆರೆಯ ಜೆಜೆಎಂ ವೈದ್ಯಕೀಯ ಕಾಲೇಜಿನಲ್ಲಿ ಅಂತಿಮ ವರ್ಷದ ಎಂಬಿಬಿಎಸ್ ಓದುತ್ತಿದ್ದಾರೆ. ಇವರ ವೀಸಾ ಅವಧಿ ಇನ್ನೂ ಮುಗಿದಿಲ್ಲ. ಹೀಗಾಗಿ ಅವರ ಗಡಿಪಾರು ಸಾಧ್ಯವಿಲ್ಲ ಎಂದು ಪೊಲೀಸರು ಸ್ಪಷ್ಟನೆ ಕೊಟ್ಟಿದ್ದಾರೆ.