ಬೆಂಗಳೂರು: ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ಸೇವೆ ಕೊಡಿಸಲು ಕ್ರಮ ಕೈಗೊಳ್ಳುತ್ತಿರುವುದಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ ಹಾಗೂ ಆರೋಗ್ಯ ಸೇವೆ ಕೊಡಿಸಲು ಕ್ರಮ ಕೈಗೊಳ್ಳುತ್ತಿರುವುದಾಗಿ ತಿಳಿಸಿದರು.
ಮಾವಿನಹಣ್ಣನ್ನು ರಾತ್ರಿ ವೇಳೆ ತಿಂತೀರಾ!? ಹಾಗಿದ್ರೆ ಈ ಸುದ್ದಿ ಮಿಸ್ ಮಾಡ್ದೆ ನೋಡಿ!
ಇನ್ನೂ ಎಂಥ ದರಿದ್ರ ಪರಿಸ್ಥಿತಿಗೆ ಈ ಸರ್ಕಾರ ಇಳಿದಿದೆ ಎಂದರೆ ಈ ಸರ್ಕಾರ ಮೃತರ ಕುಟುಂಬಕ್ಕೆ 10 ಲಕ್ಷ ರೂ. ಹಣ ಘೋಷಣೆ ಮಾಡಿದೆ. ಕನಿಷ್ಠ ಮಾನವೀಯತೆ ಇದ್ದರೆ 1 ಕೋಟಿ ರೂ. ಕೊಡಬೇಕಿತ್ತು. ಪಕ್ಕದ ಕೇರಳದಲ್ಲಿ ಆನೆ ತುಳಿತಕ್ಕೆ ಒಳಗಾದವರಿಗೆ ಈ ಸರ್ಕಾರ 15 ಲಕ್ಷ ಹಣ ನೀಡಿದೆ. ಅದಕ್ಕೆ ಸರಿ ಸಮಾನವಾಗಿ ಆದರೂ ಹಣ ಕೊಡಬೇಕಿತ್ತು ಎಂದು ವಾಗ್ದಾಳಿ ನಡೆಸಿದರು.
ಮುಸ್ಲಿಮರ ಓಟಿಗೆ ತನ್ನನ್ನು ತಾನು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರದಿಂದ ಇದಕ್ಕಿಂತ ಹೆಚ್ಚಿಗೆ ಇನ್ನೇನು ನಿರೀಕ್ಷಿಸಲು ಸಾಧ್ಯ ಎಂದು ಪ್ರಶ್ನಿಸಿದರು. ಅಲ್ಲದೆ, ಕನಿಷ್ಠ ಮಾನವೀಯತೆ ಇದ್ದಿದ್ದರೆ ಸರ್ಕಾರ ಒಂದು ಕೋಟಿ ರೂಪಾಯಿ ಪರಿಹಾರ ನೀಡುತ್ತಿತ್ತು ಎಂದರು.