ಬೆಂಗಳೂರು: ಅನಧಿಕೃತ ಬಡಾವಣೆಗಳು ನಿರ್ಮಾಣ ಮಾಡಿದ್ರೆ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಕೂಡ ಅನಧಿಕೃತ ಬಡಾವಣೆ ವಿರುದ್ಧ ಕ್ರಮ ಆಗಬೇಕು ಎಂದು ಹೇಳಿದೆ.
ಸಿಎಂ ಕೂಡ ಅನಧಿಕೃತ ಬಡಾವಣೆ ವಿರುದ್ಧ ಕ್ರಮ ಆಗಬೇಕು ಎಂದು ಹೇಳಿದ್ದಾರೆ. ಕೃಷಿ ಜಮೀನಿನಲ್ಲಿ ಅನಧಿಕೃತ ಬಡಾವಣೆ ನಿರ್ಮಾಣ ಮಾಡುತ್ತಿದ್ದಾರೆ.
Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!
ಇದನ್ನ ಸಹಿಸೋಕೆ ಸಾಧ್ಯವಿಲ್ಲ. ಹೀಗಾಗಿ ಸರ್ಕಾರ ದಿಟ್ಟ ಕ್ರಮ ತೆಗೆದುಕೊಳ್ಳುತ್ತದೆ. ಇನ್ನು ಮುಂದೆ ಅನಧಿಕೃತ, ಅಕ್ರಮ ಬಡಾವಣೆಗಳು ನಿರ್ಮಾಣ ಮಾಡಿದರೆ ಅದನ್ನ ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳುತ್ತದೆ. ಈ ಸಂಬಂಧ ಡಿಸಿಗಳಗೆ ಸೂಚನೆ ನೀಡಿದ್ದೇನೆ. ಯಾರು ಅಕ್ರಮ ಬಡಾವಣೆ ನಿರ್ಮಾಣ ಮಾಡಬಾರದು ಎಂದು ವಾರ್ನಿಂಗ್ ಕೊಟ್ಟಿದ್ದಾರೆ.