Close Menu
Ain Live News
    Facebook X (Twitter) Instagram YouTube
    Sunday, June 22
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

    By AIN AuthorJune 22, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು:- ಕರ್ನಾಟಕ ರಾಜ್ಯ ಸರ್ಕಾರವು ದ್ವೇಷ ಭಾಷಣ, ದ್ವೇಷದ ಅಪರಾಧಗಳು ಮತ್ತು ಸುಳ್ಳು ಸುದ್ದಿಗಳನ್ನು ತಡೆಗಟ್ಟಲು ಪ್ರತ್ಯೇಕ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ಸುಳ್ಳು ಸುದ್ದಿ ಹಾವಳಿಗೆ ಬ್ರೇಕ್ ಹಾಕಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ತೀರ್ಮಾನ ಮಾಡಿದೆ. ದ್ವೇಷ ಭಾಷಣ, ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ವಿಧೇಯಕ ಜಾರಿಗೆ ತರಲು ಮುಂದಾಗಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿದುಬಂದಿದೆ.

    33 ಎಸೆತಕ್ಕೆ ಶತಕ..ಶರವೇಗದ ಸೆಂಚುರಿ ಸಿಡಿಸಿ ಹೊಸ ಇತಿಹಾಸ ನಿರ್ಮಿಸಿದ ಅಭಿಷೇಕ್!

    ರಾಜ್ಯದಲ್ಲಿ ದ್ವೇಷ ಭಾಷಣ ಹಾಗೂ ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ವಿಧೇಯಕ ಮಂಡನೆಗೆ ಈಗಾಗಲೇ ಕಳೆದ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗಿದ್ದು, ಇದಕ್ಕೆ ಮುಂದಿನ ‍ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗಲಿದೆ. ಕರ್ನಾಟಕ ತಪ್ಪು ಮಾಹಿತಿ ರಚನೆ ಮತ್ತು ನಕಲಿ ಸುದ್ದಿ ನಿಷೇಧ ಮಸೂದೆ 2025 ರ ಅಡಿಯಲ್ಲಿ, ಸಾಮಾಜಿಕ ಮಾಧ್ಯಮ ಬಳಕೆದಾರರು ಕಂಡುಬಂದಲ್ಲಿ ಸರ್ಕಾರವು ಏಳು ವರ್ಷಗಳವರೆಗೆ ಶಿಕ್ಷೆ ಅಥವಾ 10 ಲಕ್ಷ ರೂ. ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ.

    ಸಾಮಾಜಿಕ ಮಾಧ್ಯಮದಲ್ಲಿ ಅಥವಾ ಪ್ರಕಟಣೆಗಳಲ್ಲಿ ತಪ್ಪು ಮಾಹಿತಿ ನೀಡಿದರೆ ಎರಡರಿಂದ ಐದು ವರ್ಷಗಳ ಜೈಲು ಶಿಕ್ಷೆ ಮತ್ತು ದಂಡ. ಈ ಅಪರಾಧಗಳನ್ನು ಸಂಜ್ಞೇಯವೆಂದು ಪರಿಗಣಿಸಲಾಗುತ್ತದೆ. ಅಲ್ಲದೇ ಇದು ಜಾಮೀನು ರಹಿತ ಪ್ರಕರಣವೆಂದು ಪರಿಗಣಿಸಲಾಗುತ್ತದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು ಹಾಗೂ ದ್ವೇಷ ಭಾಷಣ ಮಾಡುವವರು ಎಚ್ಚರಿಕೆಯಿಂದ ಇರಬೇಕು. ದ್ವೇಷ ಭಾಷಣ ಹಾಗೂ ದ್ವೇಷ ಅಪರಾಧ ತಡೆಗೆ ವಿಧೇಯಕ ಜಾರಿಗೆ ಪ್ರಸ್ತಾಪಿಸಿದ್ದು, ದ್ವೇಷ ಭಾಷಣ ಧಾರ್ಮಿಕ, ಜನಾಂಗೀಯ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ಭಾಷಣೆ, ನಿವಾಸ, ಅಂಗವೈಕಲ್ಯ, ಬುಡಕಟ್ಟು ಕುರಿತು ಯಾವುದೇ ವ್ಯಕ್ತಿಗೆ ಹಾನಿ ಮಾಡುವ ಅಥವಾ ದ್ವೇಷವನ್ನು ಉತ್ತೇಜಿಸುವ ಅಥವಾ ಪ್ರಚಾರ ಮಾಡುವ ವ್ಯಕ್ತಿ ಅಥವಾಗ ಗುಂಪಿಗೆ ಮೂರು ವರ್ಷಗಳ ಕಾಲ ಶಿಕ್ಷೆ ವಿಧಿಸಬಹುದು ಅಥವಾ 5 ಸಾವಿರ ದಂಡದ ಜತೆಗೆ ಶಿಕ್ಷೆ ವಿಧಿಸಲು ಪ್ರಸ್ತಾಪಿಸಲಾಗಿದೆ.

    ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುತ್ತಿರುವವರ ಮೇಲೆ ನಿಗಾ ಇಟ್ಟು ನಿಯಂತ್ರಿಸಲು ತಪ್ಪು ಮಾಹಿತಿ ಹಾಗೂ ಸುಳ್ಳು ಸುದ್ದಿ ಹರಡುವುದನ್ನು ನಿಯಂತ್ರಿಸಲು ವಿಧೇಯಕ ಜಾರಿಗೆ ತರಲು ಚರ್ಚಿಸಲಾಗಿದೆ. ಗೃಹ ಇಲಾಖೆ ನೀಡಿರುವ ಮಾಹಿತಿ ಪ್ರಕಾರ 2021 ರಿಂದ 2024 ವರೆಗೆ ರಾಜ್ಯದಲ್ಲಿ ಒಟ್ಟು 247 ಸುಳ್ಳು ಸುದ್ದಿ ಪ್ರಕರಣ ವರದಿಯಾಗಿವೆ. ಇವುಗಳನ್ನು ಜಿಲ್ಲಾ ಮಟ್ಟದಲ್ಲಿ ಸಾಮಾಜಿಕ ಜಾಲತಾಣಗಳ ಮಾನಿಟರಿಂಗ್ ಸೆಲ್‌ಗಳನ್ನು ತೆರೆಯಲಾಗಿದೆ. ಇದರ ಮೂಲಕ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲಾಗುತ್ತಿದೆ. ಗುಪ್ತ ಮಾಹಿತಿ ಸಿಬ್ಬಂದಿ ಹಾಗೂ ಬೀಟ್‌ ಸಿಬ್ಬಂದಿ ಮೂಲಕ ಮಾಹಿತಿ ಸಂಗ್ರಹಿಸಲಾಗುತ್ತಿದೆ.

    Demo
    Share. Facebook Twitter LinkedIn Email WhatsApp

    Related Posts

    ವಿದ್ಯಾರ್ಥಿಗಳು, ಪೋಷಕರು ಮಿಸ್ ಮಾಡ್ದೆ ಸುದ್ದಿ ಓದಿ: ಇನ್ಮುಂದೆ ಶಾಲೆಗಳಲ್ಲಿ ಹೊಸ ರೂಲ್ಸ್! ಏನದು?

    June 22, 2025

    ಆಗಸದಲ್ಲಿ ಹಾರುತ್ತಿದ್ದ ವಿಮಾನದಲ್ಲಿ ಇಂಧನ ಖಾಲಿ: ಬೆಂಗಳೂರಲ್ಲಿ ತುರ್ತು ಭೂಸ್ಪರ್ಶ!

    June 22, 2025

    ಬೆಂಗಳೂರಿಗರ ಗಮನಕ್ಕೆ: ಇಂದು ಈ ಪ್ರದೇಶದಲ್ಲಿ ಇರಲ್ಲ ಕರೆಂಟ್!

    June 22, 2025

    ಎತ್ತಿನಹೊಳೆ ಯೋಜನೆಯಲ್ಲಿ ಮೊದಲು ಕುಡಿಯುವ ನೀರು ಪೂರೈಕೆ, ನಂತರ ಕೆರೆಗಳಿಗೆ ನೀರು: ಡಿಸಿಎಂ ಡಿ.ಕೆ. ಶಿವಕುಮಾರ್

    June 21, 2025

    ವಂಚನೆ ಆರೋಪ: ಬೆಂಗಳೂರಿನ ಸಂಧ್ಯಾ ಪವಿತ್ರ ವಿರುದ್ಧ FIR!

    June 21, 2025

    ಐಟಿ ಕ್ಷೇತ್ರದ ಹುದ್ದೆಗಳನ್ನ ಎಐ ಕಿತ್ತುಕೊಳ್ಳುತ್ತಾ!? ಇನ್ಫೋಸಿಸ್ ದಿಗ್ಗಜ ಎನ್‌.ಆರ್ ನಾರಾಯಣಮೂರ್ತಿ ಏನಂದ್ರೂ!?

    June 21, 2025

    ಮಾವು ಮಾರುಕಟ್ಟೆ ಮಧ್ಯಪ್ರವೇಶ : ಬೆಲೆ ವ್ಯತ್ಯಾಸ ಪಾವತಿಗೆ ಸರ್ಕಾರದ ಒಪ್ಪಿಗೆ ಎನ್. ಚಲುವರಾಯಸ್ವಾಮಿ!

    June 21, 2025

    19 ವರ್ಷದ ಯುವಕ ಪಾರ್ಕ್ ನಲ್ಲಿ ನೇಣಿಗೆ ಶರಣು: ಸೂಸೈಡ್ ಗೆ ಕಾರಣ!?

    June 21, 2025

    ಜಲಮಂಡಳಿಯ ವತಿಯಿಂದ ತ್ವರಿತವಾಗಿ ಹೊಸ ಚರಂಡಿ ನಿರ್ಮಿಸಲು ಸೂಚನೆ: ಸ್ನೇಹಲ್

    June 21, 2025

    ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಿಜೆಪಿಗೆ ಸಹಿಸಲಾಗುತ್ತಿಲ್ಲ: ಈಶ್ವರ್ ಖಂಡ್ರೆ!

    June 21, 2025

    ಇಂದು ದೇಶಾದ್ಯಂತ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಪರಿಷತ್ ಶಾಸಕ ಟಿ. ಎ.ಶರವಣ ಭಾಗಿ

    June 21, 2025

    BJP ರಾಜ್ಯಾಧ್ಯಕ್ಷನಾಗಿ ಒಂದೂಕಾಲು ವರ್ಷ ಶ್ರದ್ಧೆಯಿಂದ ಕೆಲಸ ಮಾಡಿರುವ ತೃಪ್ತಿ ನನಗಿದೆ ಎಂದು ವಿಜಯೇಂದ್ರ ಹೇಳಿದ್ಯಾಕೆ..?

    June 21, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.