ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!

ಬೆಂಗಳೂರು:- ಕರ್ನಾಟಕ ರಾಜ್ಯ ಸರ್ಕಾರವು ದ್ವೇಷ ಭಾಷಣ, ದ್ವೇಷದ ಅಪರಾಧಗಳು ಮತ್ತು ಸುಳ್ಳು ಸುದ್ದಿಗಳನ್ನು ತಡೆಗಟ್ಟಲು ಪ್ರತ್ಯೇಕ ಕಾಯ್ದೆಗಳನ್ನು ಜಾರಿಗೊಳಿಸಲು ಮುಂದಾಗಿದೆ. ಸುಳ್ಳು ಸುದ್ದಿ ಹಾವಳಿಗೆ ಬ್ರೇಕ್ ಹಾಕಲು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ತೀರ್ಮಾನ ಮಾಡಿದೆ. ದ್ವೇಷ ಭಾಷಣ, ಸುಳ್ಳು ಸುದ್ದಿ ತಡೆಗೆ ಪ್ರತ್ಯೇಕ ವಿಧೇಯಕ ಜಾರಿಗೆ ತರಲು ಮುಂದಾಗಿದೆ. ಈ ಬಗ್ಗೆ ಸಂಪುಟ ಸಭೆಯಲ್ಲಿ ಪ್ರಾಥಮಿಕವಾಗಿ ಪ್ರಸ್ತಾಪಿಸಲಾಗಿದ್ದು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿದುಬಂದಿದೆ. … Continue reading ಇನ್ಮುಂದೆ ಸುಳ್ಳು ಸುದ್ದಿ, ದ್ವೇಷ ಭಾಷಣ ಮಾಡಿದ್ರೆ ದಂಡದ ಜೊತೆ ಜೈಲೂಟ ಫಿಕ್ಸ್!