ಬೆಂಗಳೂರು:- ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮತ್ತೊಂದು ಹೊಡೆತ ನೀಡಿದೆ. ಈಗಾಗಲೇ ಮೆಟ್ರೋ ಟಿಕೆಟ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ಜನತೆಗೆ, ಈಗ ಮೆಟ್ರೋ ನಿಲ್ದಾಣದ ಶೌಚಾಲಯಗಳ ಬಳಕೆಗೆ ಶುಲ್ಕ ವಿಧಿಸಲಾಗಿದೆ. 12 ನಿಲ್ದಾಣಗಳಲ್ಲಿ ಮೂತ್ರ ವಿಸರ್ಜನೆಗೆ 2 ರೂ. ಮತ್ತು ಮಲ ವಿಸರ್ಜನೆಗೆ 5 ರೂ. ನಿಗದಿಪಡಿಸಲಾಗಿದೆ. ಇದಕ್ಕೆ ಪ್ರಯಾಣಿಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.
ಡಾಕ್ಟರ್ ಮನೆಗೆ ಬೆಂಕಿಯಿಟ್ಟ ಪುಂಡರು ಪೊಲೀಸ್ರ ಬಲೆಗೆ… ಸುಪಾರಿ ನೀಡಿದ ಬಿಜೆಪಿ ಕಾರ್ಯಕರ್ತ ಎಸ್ಕೇಪ್..!
ಮೆಟ್ರೋ ನಿಲ್ದಾಣಗಳಲ್ಲಿ ಶೌಚಾಲಯ ಬಳಕೆಗೆ ಶುಲ್ಕ ನಿಗದಿ ಮಾಡಿರುವ BMRCL ಕ್ರಮಕ್ಕೆ ಪ್ರಯಾಣಿಕರು ವ್ಯಾಪಕ ಆಕ್ರೋಶ ಹೊರ ಹಾಕಿದ್ದಾರೆ.
ನಮ್ಮ ಮೆಟ್ರೋ ವ್ಯಾಪ್ತಿಯ 12 ಶೌಚಾಲಯ ಬಳಕೆಗೆ ಬೆಂಗಳೂರು ಮೆಟ್ರೋ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ಶುಲ್ಕ ನಿಗದಿ ಮಾಡಿದೆ. ಖಾಸಗಿ ಸಂಸ್ಥೆಯ ಜೊತೆಗೆ BMRCL ನಿರ್ವಹಣೆ ಒಪ್ಪಂದ ಮಾಡಿಕೊಂಡಿದ್ದು ಮೂತ್ರ ವಿಸರ್ಜನೆಗೆ 2 ರೂ., ಮಲ ವಿಸರ್ಜನೆಗೆ 5 ರೂ. ದರ ನಿಗದಿ ಮಾಡಿದೆ.
ನ್ಯಾಷನಲ್ ಕಾಲೇಜು, ಲಾಲ್‌ಬಾಗ್, ಸೌಥ್ ಆ್ಯಂಡ್ ಸರ್ಕಲ್, ಜಯನಗರ, ರಾಷ್ಟ್ರೀಯ ವಿದ್ಯಾಲಯ ರಸ್ತೆ, ಬನಶಂಕರಿ, ಜಯಪ್ರಕಾಶ ನಗರ, ಯೆಲಚೇನಹಳ್ಳಿ, ಸರ್ ಎಂ.ವಿಶ್ವೇಶ್ವರಯ್ಯ ನಿಲ್ದಾಣ ಸೆಂಟ್ರಲ್ ಕಾಲೇಜು, ಡಾ.ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ, ಕಬ್ಬನ್ ಪಾರ್ಕ್ ಮತ್ತು ಮೆಜೆಸ್ಟಿಕ್ ನಿಲ್ದಾಣಗಳಲ್ಲಿನ ಶೌಚಾಲಯಗಳನ್ನು ಇನ್ನು ಮುಂದೆ ಪಾವತಿಸಿ ಬಳಸಬೇಕಾಗುತ್ತದೆ. ಶೌಚಾಲಯಕ್ಕೆ ದರ ವಿಧಿಸಿದ್ದಕ್ಕೆ ಸಾರ್ವಜನಿಕರಿಂದ ಭಾರೀ ಟೀಕೆ ವ್ಯಕ್ತವಾಗುತ್ತಿದೆ.