ಬೆಳಗಾವಿ:- ನಗರದ ಹೊರ ವಲಯದ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡದಲ್ಲಿ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘಟನೆ ಜರುಗಿದೆ. ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಎಫ್ಐಆರ್ ದಾಖಲಾದ ಒಂದೇ ದಿನದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಎ1 ಸೇರಿ ಉಳಿದ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ನೇಪಾಳಿ ದಂಪತಿಯಿಂದ ಮನೆಗಳ್ಳತನ: ಚಿನ್ನ, ನಗದು ಕದ್ದು ಎಸ್ಕೇಪ್.. ಐದರಿಂದ ಕೃತ್ಯ!
ಇತ್ತೀಚೆಗೆ ರೆಸಾರ್ಟ್ವೊಂದರಲ್ಲಿ ಅಪ್ರಾಪ್ತೆ ಮೇಲೆ ಗ್ಯಾಂಗ್ರೇಪ್ ನಡೆದಿತ್ತು. ಈ ಪ್ರಕರಣದಲ್ಲಿ ಇಬ್ಬರು ಬಾಲಾಪರಾಧಿ ಸೇರಿ ಐವರನ್ನು ಬಂಧಸಲಾಗಿತ್ತು. ಈ ಘಟನೆ ಮಾಸುವ ಮುನ್ನವೇ ಇದೀಗ ಜಿಲ್ಲೆಯಲ್ಲಿ ಮತ್ತೊಂದು ಗ್ಯಾಂಗ್ರೇಪ್ ಪ್ರಕರಣ ಬೆಳಕಿಗೆ ಬಂದಿದೆ.
ಆರು ತಿಂಗಳ ಹಿಂದೆ ಸ್ನೇಹಿತ ಬಾಲಕಿಯನ್ನು ಪುಸಲಾಯಿಸಿ ಗುಡ್ಡಕ್ಕೆ ಕರೆದೊಯ್ದು 6 ದುರುಳರಿಂದ ಅತ್ಯಾಚಾರವೆಸಗಲಾಗಿದೆ. ಕೃತ್ಯವೆಸಗುವಾಗ ದುಷ್ಕರ್ಮಿಗಳು ವಿಡಿಯೋ ಮಾಡಿಕೊಂಡಿದ್ದಾರೆ. ಬಳಿಕ ಅದೇ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ಮಾಡಿದ್ದಾರೆ. ಈ ವೇಳೆ ಕೂಡ ವಿಡಿಯೋ ಮಾಡಿಕೊಂಡಿದ್ದಾರೆ. ಅದೇ ವಿಡಿಯೋಗಳನ್ನು ಇಟ್ಟುಕೊಂಡು ಇದೀಗ ಮತ್ತೆ ಬಾಲಕಿಗೆ ಬೆದರಿಕೆ ಹಿನ್ನೆಲೆ ಎಪಿಎಂಸಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ದೂರಿನ ಅನ್ವಯ ಪೊಲೀಸರು ತನಿಖೆ ಕೈಗೊಂಡಿದ್ದಾರೆ.