ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಕ್ಯಾನ್ಸರ್ ವಿರುದ್ಧ ಹೋರಾಡಿ ಗೆದ್ದಿದ್ದಾರೆ. ಸದ್ಯ ಕ್ಯಾನ್ಸರ್ ಮುಕ್ತರಾಗಿರುವ ಶಿವಣ್ಣ ಸಿನಿಮಾ, ಶೂಟಿಂಗ್ ಅಂತಾ ಬ್ಯುಸಿಯಾಗಿದ್ದಾರೆ. ಈ ನಡುವೆ ಶಿವರಾಜ್ ಕುಮಾರ್ ಮಡದಿ ಹಾಗೂ ನಿರ್ಮಾಪಕಿಯೂ ಆಗಿರುವ ಗೀತಾ ಶಿವರಾಜ್ಕುಮಾರ್ ಅವರಿಗೆ ಸರ್ಜರಿಗೆ ಒಳಗಾಗಿದ್ದಾರೆ.
ಗೀತಾಕ್ಕ ಅವರಿಗೆ ಕಳೆದ ಕೆಲವು ದಿನಗಳಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ಸಂಬಂಧ ವೈದ್ಯರು ಅವರಿಗೆ ಕತ್ತಿನ ಭಾಗದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಶಸ್ತ್ರ ಚಿಕಿತ್ಸೆ ನಡೆದಿದ್ದು, ಇಂದು ಸಂಜೆ ವೇಳೆಗೆ ಆಸ್ಪತ್ರೆಯಿಂದ ಗೀತಾ ಶಿವರಾಜ್ ಕುಮಾರ್ ಡಿಸ್ಚಾರ್ಜ್ ಆಗಲಿದ್ದಾರೆ.
ಮಧು ಬಂಗಾರಪ್ಪ ಹೇಳಿದ್ದೇನು?
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಿನ್ನೆ ಹಮ್ಮಿಕೊಂಡಿದ್ದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರ ಸಭೆಯಲ್ಲಿ ಮಧು ಬಂಗಾರಪ್ಪ ಗೀತಾಕ್ಕ ಆರೋಗ್ಯದ ಬಗ್ಗೆ ಮಾತನಾಡಿದ್ದಾರೆ. ಸಮಾರಂಭಕ್ಕೆ ನಾನು ಬೆಳಗ್ಗೆ ಬರಬೇಕಿತ್ತು, ಆದರೆ ಬರಲು ಆಗಲಿಲ್ಲ. ಕಾರಣ ಗೀತಕ್ಕ ಅವರದ್ದು ಸರ್ಜರಿ ಇತ್ತು, ಹಾಗಾಗಿ ಬರಲಿಲ್ಲ. ನಿನ್ನೆ ಇವತ್ತು 2 ದಿನ ಸರ್ಜರಿ ಇತ್ತು,. ಈಗ ಸರ್ಜರಿ ಮುಗಿದಿದೆ, ಅವರ ಆರೋಗ್ಯ ಸುಧಾರಿಸಿದೆ ಎಂದು ಹೇಳಿದ್ದಾರೆ. ಗೀತಾ ಶಿವರಾಜ್ ಕುಮಾರ್ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅಭಿಮಾನಿಗಳು ಯಾವುದೇ ಆತಂಕಪಡುವ ಅಗತ್ಯವಿಲ್ಲ.