ಮಂಡ್ಯ: ಮಂಡ್ಯದಲ್ಲಿ ಸಂಚಾರಿ ಪೊಲೀಸರ ನಿರ್ಲಕ್ಷ್ಯದಿಂದ ಮೂರೂವರೆ ವರ್ಷದ ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಸಂಚಾರಿ ಠಾಣೆಯ ಮೂವರು ASI ಗಳನ್ನು ಅಮಾನತು ಮಾಡಿ ಆದೇಶ ನೀಡಲಾಗಿದೆ.
ನಾಗರಾಜು, ಜಯರಾಮ್, ಗುರುದೇವ್ ಸಸ್ಪೆಂಡ್ ಆದ ಪೊಲೀಸರಾಗಿದ್ದು, ಮಂಡ್ಯದಲ್ಲಿ ಸಂಚಾರಿ ಪೊಲೀಸರ ನಿರ್ಲಕ್ಷ್ಯದಿಂದ ಮೂರೂವರೆ ವರ್ಷದ ಮಗು ಸಾವನ್ನಪ್ಪಿದೆ.
ನೀವು ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ತಿನ್ನುತ್ತೀರಾ!? ಹಾಗಿದ್ರೆ ಈ ಸುದ್ದಿ ನೋಡಿ!
ನಾಯಿ ಕಚ್ಚಿದ ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಹೆಲ್ಮೆಟ್ ಪರಿಶೀಲನೆಗಾಗಿ ಪೊಲೀಸರು ಬೈಕ್ ನಿಲ್ಲಿಸಿದ್ದರಿಂದ ಅಪಘಾತ ಸಂಭವಿಸಿದೆ.
ನಡೆದದ್ದೇನು?
ಮಗು ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಹೆಲ್ಮೆಟ್ ತಪಾಸಣೆಗಾಗಿ ಸ್ವರ್ಣಸಂದ್ರ ಬಳಿ ಸಂಚಾರಿ ಠಾಣೆ ಪೊಲೀಸರು ಬೈಕ್ ಅಡ್ಡಗಟ್ಟಿದ್ದಾರೆ. ಹೀಗಾಗಿ ಮಗು ಸೇರಿದಂತೆ ದಂಪತಿ ಆಯಾ ತಪ್ಪಿ ಬಿದಿದ್ದಾರೆ. ಈ ವೇಳೆ ಮಗುವಿನ ತಲೆಗೆ ಬಲವಾದ ಪೆಟ್ಟು ಬಿದ್ದು, ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದೆ.
ಮಗುವನ್ನು ಮಡಿನಲ್ಲಿ ಇಟ್ಟುಕೊಂಡು ರಸ್ತೆಯಲ್ಲೇ ಪೋಷಕರು ಗೋಳಾಡಿದ್ದಾರೆ. ಘಟನೆ ಕಣ್ಣಾರೆ ಕಂಡು ಸಾರ್ವಜನಿಕರು ದಿಗ್ಭ್ರಮೆಗೊಂಡರೆ, ಮಂಡ್ಯ ಸಂಚಾರಿ ಪೊಲೀಸರಿಗೆ ಹೆತ್ತಕರುಳು ಹಿಡಿಶಾಪ ಹಾಕಿದೆ. ಸಂಚಾರಿ ಪೊಲೀಸರ ವಿರುದ್ಧ ಸ್ಥಳೀಯರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.