ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಬಾಲಕಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಇದು ಇಡೀ ಸಮಾಜ ತಲೆ ತಗ್ಗಿಸುವ ವಿಚಾರ ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಇದು ಇಡೀ ಸಮಾಜ ತಲೆಗಿಸುವ ವಿಚಾರ ಮಗುವಿನ ಮುಖ ನೋಡಲು ಆಗುತ್ತಿಲ್ಲ ಆರೋಪಿ ಡ್ರಗ್ ಸೇವನೆ ಬಗ್ಗೆ ಮಾಹಿತಿ ಇಲ್ಲ ಆರೋಪಿ ಮರಣೋತ್ತರ ಪರೀಕ್ಷೆ ಬಳಿಕ ಗೊತ್ತಾಗಲಿದೆ ಹುಬ್ಬಳ್ಳಿಯಲ್ಲಿ ಇನ್ನು ಮುಂದೆ ಮಹಿಳಾ ಸುರಕ್ಷಿತ ಕ್ರಮ ಕೈಗೊಳ್ಳಾಗುತ್ತದೆ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ
ನಮ್ಮ ಸರ್ಕಾರ ಬಾಲಕಿ ಕುಟುಂಬಕ್ಕೆ ಈಗಾಗಲೇ ಪರಿಹಾರ ಘೋಷಣೆ ಮಾಡಿದೆ ಜಮೀರ್ ಅಹ್ಮದ್ ಕೂಡ ವಸತಿ ಇಲಾಖೆಯಿಂದ ಮೃತ ಬಾಲಕಿ ಕುಟುಂಬಸ್ಥರಿಗೆ ಮನೆ ನೀಡುವ ಭರವಸೆ ನೀಡಿದ್ದಾರೆ ಸರ್ಕಾರದ ಜೊತೆ ಮಾತನಾಡಿ ಇನ್ನೂ ಹೆಚ್ಚಿನ ಪರಿಹಾರಕ್ಕಾಗಿ ಮನವಿ ಮಾಡುತ್ತೇನೆ ಎಂದರು.