ಗದಗ: ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಣೆ ಮಾಡಿ ಇಟ್ಟಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ನಡೆದಿದೆ. ಬಾಲಪ್ಪ ಗೌಡ್ರ ಎಂಬುವರು ಸಂಗ್ರಹಿಸಿಟ್ಟಿದ್ದರು.
ಗಜೇಂದ್ರಗಡ ಭಾಗದಲ್ಲಿ ಅಕ್ರಮ ಅಕ್ಕಿ ಸಾಗಾಟ ದಂಧೆ ಎಗ್ಗಿಲ್ಲದೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಸ್ಥಳಕ್ಕೆ ರೋಣ ತಾಲೂಕಿನ ಆಹಾರ ಇಲಾಖೆ ಅಧಿಕಾರಿ ಶಾಂತಾ ಚವಡಿ, ಗಜೇಂದ್ರಗಡ ಪಿಎಸ್ಐ ಸೋಮನಗೌಡ ಹಾಗೂ ಸಿಬ್ಬಂದಿಗಳು ಭೇಟಿ ಪರಿಶೀಲನೆ ನಡೆಸಿದ್ದು, ಸುಮಾರು 75 ಪ್ಯಾಕೆಟ್ ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿದೆ.
ಈ ಬಣ್ಣದ ಬೆಕ್ಕು ನಿಮ್ಮ ಮನೆಗೆ ಬಂದರೆ ಅದೃಷ್ಟ ಕೈಹಿಡಿಯುವ ಮುನ್ಸೂಚನೆಯಂತೆ..!
ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟದ ಕಿಂಗ್ ಪಿನ್ ಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಡಜನರು ಹೊಟ್ಟೆ ತುಂಬ ಊಟ ಮಾಡಲಿ ಎಂದು ಸರ್ಕಾರ ಕೋಟಿ ಕೋಟಿ ಖರ್ಚು ಮಾಡಿ ಪಡಿತರ ವಿತರಿಸುತ್ತದೆ. ಆದ್ರೆ ಕೊಪ್ಪಳ ಜಿಲ್ಲೆಯಲ್ಲಿ ಪಡಿತರ ಧಾನ್ಯಗಳು ಕಾಳ ಸಂತೆಯಲ್ಲಿ ಮಾರಾಟವಾಗುತ್ತಿವೆ.