ಬೆಂಗಳೂರು: 9 ಕೋಟಿ ರೂಪಾಯಿ ಮೌಲ್ಯದ ಚಿನ್ನದ ವಂಚನೆ ಆರೋಪ ಎದುರಿಸುತ್ತಿರುವ ಐಶ್ವರ್ಯ ಗೌಡ ಅವರ ಬೆಂಗಳೂರು ಮತ್ತು ಮಂಡ್ಯದಲ್ಲಿರುವ ನಿವಾಸಗಳ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಇದೀಗ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆರೋಪಿ ಐಶ್ವರ್ಯ ಗೌಡ ಅವರನ್ನು ವಶಕ್ಕೆ ಪಡೆದಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಐಶ್ವರ್ಯ ಗೌಡ ನಿವಾಸ ಮತ್ತು ಗೊರಗುಂಟೆಪಾಳ್ಯದಲ್ಲಿರುವ ಫ್ಲ್ಯಾಟ್ ಮೇಲೆ ಇಡಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿದ್ದರು. ಈ ವೇಳೆ ಇಡಿ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.
Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!
ಇನ್ನು, ಇಡಿ ಅಧಿಕಾರಿಗಳು ಬೆಂಗಳೂರಿನ ಆರ್.ಆರ್.ನಗರದ ಕಾಂಗ್ರೆಸ್ ಮುಖಂಡ ತಿಬ್ಬೇಗೌಡ ನಿವಾಸದ ಮೇಲೂ ದಾಳಿ ನಡೆಸಿದ್ದರು. ತಿಬ್ಬೇಗೌಡ ಅವರ ಬ್ಯಾಂಕ್ ಅಕೌಂಟ್ಸ್ ಡೀಟೆಲ್ಸ್, ದಾಖಲೆಗಳನ್ನು ಇಡಿ ಅಧಿಕಾರಿಗಳು ಕೊಂಡೊಯ್ದಿದ್ದಾರೆ.