ಬೀದರ್: ನ್ಯಾಯಾಧೀಶರ ಮನೆಯಲ್ಲಿ ಕಳ್ಳತನ ನಡೆದಿದೆ. ಬೀದರ್ ನಗರದ ಜನವಾಡ ರಸ್ತೆಯಲ್ಲಿರುವ ನ್ಯಾಯಾಧೀಶರ ವಸತಿ ಗೃಹದಲ್ಲಿ ಘಟನೆ ನಡೆದಿದೆ. ಮನೆಗೆ ನುಗ್ಗಿದ ಖದೀಮರು ಸುಮಾರು 7 ಲಕ್ಷ ರೂ.ಗಿಂತಲೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿ ಪರಾರಿಯಾಗಿದ್ದಾರೆ.
ಬೀದರ್‌ನ 2ನೇ ಹೆಚ್ಚುವರಿ ಸಿವಿಲ್ ಮತ್ತು 2ನೇ ಜೆಎಂಎಫ್‌ಸಿ ಜಡ್ಜ್ ಎಂ.ಡಿ.ಶೇಜ್ ಚೌಟಾಯಿ ವಸತಿ ಗೃಹದಲ್ಲಿ ಕಳ್ಳತನವಾಗಿದೆ. ಕುಟುಂಬದ ಸದಸ್ಯರೆಲ್ಲರು ಸೇರಿ ಕೊಪ್ಪಳಕ್ಕೆ ಹೋಗಿದ್ದರು. ಈ ವೇಳೆ ಮನೆ ನುಗ್ಗಿದ ಕಳ್ಳರು ಬರೋಬ್ಬರಿ ಏಳೂವರೆ ಲಕ್ಷ ಮೌಲ್ಯದ ಚಿನ್ನಾಭರಣವನ್ನು ಕದ್ದು, ಪರಾರಿಯಾಗಿದ್ದಾರೆ. ಇನ್ನೂ ಕಳ್ಳತನ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಈ ಕುರಿತು ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.