ಬೆಂಗಳೂರು: ಕಿಚ್ಚ ಸುದೀಪ್ ಅಭಿನಯದ ಮಾಣಿಕ್ಯ, ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಪಟಾಕಿ ಸಿನಿಮಾದಲ್ಲಿ ಅಭಿನಯಿಸಿದ್ದ ನಟಿ ರನ್ಯಾ ರಾವ್ ಅವರನ್ನು ಬಂಧಿಸಿರುವುದು ಎಲ್ಲಾರಿಗೂ ಗೊತ್ತಿರುವ ವಿಚಾರವಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೋಲ್ಡ್ ಸ್ಮಗ್ಲಿಂಗ್ ಮಾಡುತ್ತಿದ್ದ ಆರೋಪದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಮಿಂಚಿನ ಕಾರ್ಯಾಚರಣೆ ನಡೆಸಿ ರನ್ಯಾ ಅವರನ್ನು ವಶಕ್ಕೆ ಪಡೆದಿದ್ದರು.
Mango Benefits: ನಿಮಗೆ ಗೊತ್ತೆ..? ತೂಕ ಹೆಚ್ಚಾಗುವುದನ್ನು ತಡೆಯುತ್ತವಂತೆ ಮಾವಿನ ಹಣ್ಣು!
ಇದೀಗ ರನ್ಯಾರಾವ್ ವಿರುದ್ಧ ಕಾಫಿಪೋಸಾ ಕಾಯ್ದೆಯನ್ನು ಜಾರಿ ಮಾಡಲಾಗಿದೆ. ಹೀಗಾಗಿ ರನ್ಯಾರಾವ್ 1 ವರ್ಷ ಕಾಲ ಜೈಲಿನಲ್ಲೇ ಇರಬೇಕಾದ ಅನಿವಾರ್ಯ ಎದುರಾಗಿದೆ. ರನ್ಯಾರಾವ್ 100 ಕೆಜಿಯಷ್ಟು ಚಿನ್ನವನ್ನು ವಿದೇಶದಿಂದ ಕಳ್ಳ ಸಾಗಾಣೆ ಮಾಡಿರುವುದು ತನಿಖೆಯಲ್ಲಿ ಬಹಿರಂಗವಾಗಿದೆ. ಇದೀಗ ರನ್ಯಾರಾವ್, ತರುಣ್ ಕೊಂಡಾರಾಜ್ ಮತ್ತು ಸಾಹಿಲ್ ಜೈನ್ ವಿರುದ್ಧ ಕಾಫಿಪೋಸಾ ಜಾರಿ ಮಾಡಲಾಗಿದೆ.
ಏನಿದು ಕಾಫಿಪೋಸಾ ಕಾಯ್ದೆ?
ಕಾಫಿಪೋಸಾ ಎಂದರೆ ವಿದೇಶಿ ವಿನಿಮಯ ನಿಯಂತ್ರಣ ಹಾಗೂ ಕಳ್ಳ ಸಾಗಾಣಿಕೆ ತಡೆ ಕಾಯ್ದೆಯಾಗಿದೆ. ಈ ಕಾಫಿಪೋಸಾ ಕಾಯ್ದೆಯನ್ನು ಕಳ್ಳಸಾಗಣೆ ಮಾಡುವವರ ವಿರುದ್ಧ ಹಾಕಲಾಗುತ್ತದೆ. ಆರೋಪಿಯು ಜಾಮೀನು ಪಡೆಯಬಾರದು ಎಂಬುದು ಇದರ ಮೂಲ ಉದ್ದೇಶವಾಗಿದೆ.
ಆರೋಪಿಯು ಜಾಮೀನು ಪಡೆದು ಹೊರಗೆ ಬಂದರೆ ನಿರಂತರವಾಗಿ ಮತ್ತೆ ಕಳ್ಳ ಸಾಗಾಣಿಕೆ ಮಾಡುತ್ತಾರೆ. ಅಲ್ಲದೇ ಜೈಲಿನಿಂದ ಬಂದ ಬಳಿಕ ತಪ್ಪಿಸಿಕೊಳ್ಳಬಹುದು. ತನಿಖೆಗೆ ಸರಿಯಾಗಿ ಸಹಕಾರ ಕೊಡದೇ, ನಿರಂತರವಾಗಿ ಸ್ಮಗ್ಲಿಂಗ್ನಲ್ಲಿ ಮುಂದುವರೆಯುತ್ತಾರೆ ಎಂದು ಕಾಯ್ದೆ ಜಾರಿಗೊಳಿಸಲಾಗುತ್ತದೆ.
ಕಾಫಿಪೋಸಾ ಕಾಯ್ದೆಯನ್ನು ಕೇಂದ್ರ ಆರ್ಥಿಕ ಗುಪ್ತಚರ ಬ್ಯೂರೋ(CEIB) ಜಾರಿ ಮಾಡುತ್ತದೆ. ಸಿಇಐಬಿಗೆ ವಿಚಾರ ನೀಡಬೇಕಿರೋದು ಡಿಆರ್ಐ(ಕಂದಾಯ ಗುಪ್ತಚರ ನಿರ್ದೇಶನಾಲಯ). ಕಾಫಿಪೋಸಾ ಕಾಯ್ದೆಯನ್ನು ಜಾರಿಗೊಳಿಸಿದರೆ ಆರೋಪಿಯು 1 ವರ್ಷಗಳ ಕಾಲ ಜೈಲಿನಲ್ಲೇ ಇರಬೇಕು.