ಬೆಂಗಳೂರು: ಸದ್ಯ ಸ್ಯಾಂಡಲ್ವುಡ್ ನಟಿ ರನ್ಯಾ ರಾವ್ ಸಿಕ್ಕಾಪಟ್ಟೆ ಟ್ರೆಂಡ್ನಲ್ಲಿ ಇದ್ದಾರೆ. ಒಂದು ಕೆಟ್ಟ ಕಾರಣಕ್ಕೆ ಸುದ್ದಿ ಮಾಡಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ನಲ್ಲಿ ಜೈಲುಪಾಲಾಗಿದ್ದು, ಇದೀಗ ಜಾಮೀನು ನೀಡುವಂತೆ ಆಗ್ರಹಿಸಿ ನಟಿ ರನ್ಯಾ ರಾವ್ ಹೈಕೋರ್ಟ್ ಮೆಟ್ಟಿಲು ಏರಿದ್ದಾರೆ.
ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ರನ್ಯಾ ರಾವ್ ಜಾಮೀನು ಕೋರಿ 64 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ, ನ್ಯಾಯಾಲಯ ಹಲವು ಕಾರಣಗಳನ್ನು ನೀಡಿ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಇದೀಗ, ರನ್ಯಾ ರಾವ್ ಪರ ವಕೀಲರು ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಜಾಮೀನು ನೀಡುವಂತೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಒಂದು ಮುತ್ತಿಗೆ 50 ಸಾವಿರ: ಹಣ ವಾಪಸ್ ಕೇಳಿದ್ದಕ್ಕೆ ಹನಿಟ್ರ್ಯಾಪ್ ಬೆದರಿಕೆ, ಶಿಕ್ಷಕಿ ಸೇರಿ ಮೂವರು ಅರೆಸ್ಟ್!
ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಅನ್ನು ಡಿಆರ್ಐ ಅಧಿಕಾರಿಗಳು ಮಾರ್ಚ್ 3 ರಂದು ಬೆಂಗಳೂರಿನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದರು. ನಟಿ ರನ್ಯಾ ರಾವ್ ಬರೋಬ್ಬರಿ 14 ಕೆಜಿಗೂ ಹೆಚ್ಚಿನ ತೂಕದ ಚಿನ್ನವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದ್ದಿದ್ದರು. ಸದ್ಯ, ನಟಿ ರನ್ಯಾ ರಾವ್ ಪರಪ್ಪನ ಅಗ್ರಹಾದಲ್ಲಿದ್ದಾರೆ.